ಮಂಗಳೂರು: ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನದಲ್ಲಿ ಸೋಮವಾರ ಮತ್ತು ಮಂಗಳವಾರ ನಡೆದ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಶನ್ (ಸಿಪಿಎ) ಭಾರತ ವಲಯದ ರೋನ್-2ರ ಸಮ್ಮೇಳನದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗವಹಿಸಿದರು. ಹಿಮಾಚಲ ಪ್ರದೇಶದ ವಿಧಾನಸಭೆಯ ಅಧ್ಯಕ್ಷ ಕುಲ್‌ದೀಪ್ ಸಿಂಗ್ ಪತಾನಿಯಾ ಅವರ ಆಹ್ವಾನದ ಮೇರೆಗೆ ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಫರೀದ್ ಭಾಗವಹಿಸಿ ರಾಜ್ಯ ಸಂಪತ್ತು ಗಳ ನಿರ್ವಹಣೆ ಹಾಗೂ ರಾಜ್ಯದ ಅಭಿವೃದ್ಧಿಯಲ್ಲಿ ಶಾಸನ ಮಂಡಳಿಗಳ ಪಾತ್ರ, ಶಾಸನ ಮಂಡಳಿಗಳ ಕಾರ್ಯಪದ್ಧತಿಗಳಲ್ಲಿ ಕೃತಕ ಬುದ್ಧಿಮತ್ತೆ ಬಳಸುವಿಕೆ ಸಹಿತ ಮೂರು ವಿಷಯದ ಬಗ್ಗೆ ಅಭಿಪ್ರಾಯ ಮಂಡಿಸಿದರು. ಲೋಕಸಭೆ ಸಭಾಧ್ಯಕ್ಷ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ಸಮ್ಮೇಳನವು ಜರುಗಿತು. ಸಮ್ಮೇಳನದಲ್ಲಿ ಝನ್-2ರ ರಾಜ್ಯಗಳಾದ ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಪಂಜಾಬ್, ಹರಿಯಾಣ, ನವದೆಹಲಿ ರಾಜ್ಯಗಳ ವಿಧಾನ ಸಭಾಧ್ಯಕ್ಷರುಗಳು ಭಾಗವಹಿಸಿದ್ದರು.