ಮಂಗಳೂರು: ಮುದ್ರಣ ಮಾಧ್ಯಮ ಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸ್ ಇನ್ನೂ ಉಳಿದಿದೆ ಎನ್ನುವ ಅಭಿಪ್ರಾಯ ಇದೆ ಎಂದು ವಾಲ್ಟರ್ ನಂದಳಿಕೆ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಮಾಧ್ಯಮದ ಸವಾಲು ಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. .ಇತ್ತೀಚೆಗೆ ಸಮೀಕ್ಷೆ ಯೊಂದರ ಪ್ರಕಾರ ಶೇ.60ರಷ್ಟು ಜನರು ಮುದ್ರಣ ಮಾಧ್ಯಮವನ್ನು ನಂಬುತ್ತಾರೆ. ಶೇ.63ರಷ್ಟು ಜನರು ಟಿ.ವಿ ನ್ಯೂಸ್ ನ್ನು ನಂಬುವುದಿಲ್ಲ.ಶೇ 89 ರಷ್ಟು ಮಂದಿ ಸಾಮಾಜಿಕ ಮಾಧ್ಯಮಗಳನ್ನು ಆನ್ ಲೈನ್ ವೆಬ್ ಸೈಟ್ ಗಳನ್ನು ನಂಬುವುದಿಲ್ಲ ಎಂದವರು ತಿಳಿಸಿದ್ದಾರೆ. ಮಾದ್ಯಮ ಕ್ಷೇತ್ರದಲ್ಲಿ ಡಿಜಿಟಲ್ ಕೃತಕ ಬುದ್ಧಿ ಮತ್ತೆಯ ತಂತ್ರಜ್ಞಾನದ ಪ್ರವೇಶವಾಗಿದೆ ಆದರೆ ಸೃಜನಶೀಲತೆ ಮೂಲಕ ಈ ಸವಾಲು ಗಳನ್ನು ಎದುರಿಸಬಹುದು. ಮಾಧ್ಯಮ ಗಳು ಜನರಲ್ಲಿ ವಿಶ್ವಾಸಾರ್ಹತೆಯನ್ನು ಮೂಡಿ ಸುವ ಬಗ್ಗೆ ಹೆಚ್ಚು ಕಾರ್ಯ ಪ್ರವೃತ್ತ ವಾಗಬೇಕು ಎಂದರು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮ್ಮರ್ ಯು.ಎಚ್. ಮಾತನಾಡುತ್ತಾ, ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸವಾಲು ಗಳಿವೆ.ಈ ನಡುವೆ ಮಾಧ್ಯಮ ಕ್ಷೇತ್ರದ ತಳ ಮಟ್ಟದಲ್ಲಿ ಪತ್ರಿಕಾವಿತರಣೆ ನಡೆಸುತ್ತಿ ರುವವರನ್ನು ಗೌರವಿಸುತ್ತಿರುವುದು ಶ್ಲಾಘನೀಯ ಎಂದರು.
ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕ ರಘುರಾಮ.ಕೆ ಯವರನ್ನು ಸನ್ಮಾನಿಸ ಲಾಯಿತು. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ,ದಕ್ಷಿಣ ಕನ್ನಡ ನಿವೃತ್ತ. ಮಾಜಿ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ಹಿರಿಯ ಪತ್ರಕರ್ತರಾದ ಚಿದಂಬರ ಬೈಕಂಪಾಡಿ, ಕುಮಾರನಾಥ್, ಕೆ.ವಿ.ಜಾರ್ಜ್ ದ.ಕ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.