image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭ : 8 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭ : 8 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: "ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ಈ ಭಾಗದ 8 ಜಿಲ್ಲೆಗಳಲ್ಲಿ ಶನಿವಾರದವರೆಗೂ ಭಾರಿ ಮಳೆ ಬೀಳುವ ಸಾಧ್ಯತೆ ಇದೆ" ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನು ಧಾರವಾಡ, ಗದಗ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಹಳೆ ಮೈಸೂರು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆ ಆಗಲಿದೆ. ಕೆಲ ಪ್ರದೇಶಗಳಲ್ಲಿ ಮಾತ್ರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾದ ಹಿನ್ನೆಲೆಯಲ್ಲಿ ಇಂದು ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಆಗುಂಬೆ, ಶೃಂಗೇರಿ, ಕಳಸ, ಕೊಪ್ಪ, ಜೋಯ್ಡಾ, ಗೇರುಸೊಪ್ಪ, ಸಿದ್ದಾಪುರ, ಮೂಡುಬಿದಿರೆ, ಕಾರ್ಕಳ, ಲೋಂಡಾ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ, ಅಂಕೋಲಾ, ಯಲ್ಲಾಪುರ, ಹುಮ್ನಾಬಾದ್, ಸೋಮವಾರಪೇಟೆ, ಭಾಗಮಂಡಲ, ನಾಪೋಕ್ಲು, ಸೇಡಂ, ಮಂಠಾಳ, ಚಿತ್ತಾಪುರ, ಖಾನಾಪುರ, ಕುಮಟಾ, ಉಡುಪಿ, ಕೋಟಾ, ಗೋಕರ್ಣ, ಮುಲ್ಕಿ, ಹಳಿಯಾಳ, ಕಾರವಾರ, ಬೀದರ್, ಕೂಡಲಸಂಗಮ, ವಿರಾಜಪೇಟೆ, ಬಾಳೆಹೊನ್ನೂರು, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Category
ಕರಾವಳಿ ತರಂಗಿಣಿ