image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು ಭಾಗದಲ್ಲಿ ಸಂಪುಟ ಸಭೆ ನಡೆದರೆ ಅನುಕೂಲವಾಗಲಿದೆ : ಐವನ್ ಡಿಸೋಜಾ

ಮಂಗಳೂರು ಭಾಗದಲ್ಲಿ ಸಂಪುಟ ಸಭೆ ನಡೆದರೆ ಅನುಕೂಲವಾಗಲಿದೆ : ಐವನ್ ಡಿಸೋಜಾ

ಮಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಈಗಾಗಲೇ ಚಾಮರಾಜನಗರ, ನಂದಿಹಿಲ್ಸ್, ಕಲಬುರ್ಗಿಯಲ್ಲಿ ಈಗಾಗಲೇ ಸಚಿವ ಸಂಪುಟ ಸಭೆ ನಡೆದಿದ್ದು, ವಿಜಯಪುರದಲ್ಲಿ ಮುಂದಿನ ಸಚಿವ ಸಂಪುಟ ಸಭೆ ನಡೆಯಲಿದೆ. ಬಳಿಕ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾಗಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರಕಾರಕ್ಕೆ ಬೇಡಿಕೆ ಸಲ್ಲಿಸುವುದಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ. ಮನಪಾ ಕಟ್ಟಡದಲ್ಲಿರುವ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತಾಡಿದ ಅವರು, ಉತ್ತರ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆಯುವ ನಿಟ್ಟಿನಲ್ಲಿ ಈ ಭಾಗದಲ್ಲಿ ಸಂಪುಟ ಸಭೆ ನಡೆದರೆ ಅನುಕೂಲವಾಗಲಿದೆ ಎಂದವರು ಹೇಳಿದರು.

ದ.ಕ. ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಬಗ್ಗೆ ಈಗಾಗಲೇ ರಾಜ್ಯ ಮಟ್ಟದಲ್ಲಿ ಸಭೆ ನಡೆದಿದೆ. ಜಿಲ್ಲೆಗಳಲ್ಲಿ ಇನ್ನೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿ ದೊಡ್ಡ ಯೋಜನೆ ಘೋಷಣೆಯಾಗಿಲ್ಲ. ಮೀನುಗಾರಿಕೆಗೆ ಪೂರಕವಾಗಿ ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ. ಇದೇ ವೇಳೆ ದ.ಕ. ಜಿಲ್ಲೆಯನ್ನು ಮಂಗಳೂರು ಜಿಲ್ಲೆಯನ್ನಾಗಿ ನಾಮಕರಣಗೊಳಿಸುವ ಬಗ್ಗೆ ಚರ್ಚೆ ನಡೆದಿದೆ. ಮಂಗಳೂರು ಹೆಸರು ಅಂತಾರಾಷ್ಟ್ರೀಯವಾಗಿ ಮನ್ನಣೆ ಪಡೆದಿದೆ. ಈಗಾಗಲೇ ಹಲವು ಜಿಲ್ಲೆಗಳ ಮರು ನಾಮಕರಣ ನಡೆದಿದೆ. ಈ ಜಿಲ್ಲೆಗೂ ಹೊಸ ಹೆಸರು ನೀಡುವ ಬಗ್ಗೆ ಸಚಿವ ಸಂಪುಟದ ಸಭೆ ಕರೆಯಬೇಕು ಎಂದು ಅವರು ಆಗ್ರಹಿಸಿದರು.

 

Category
ಕರಾವಳಿ ತರಂಗಿಣಿ