image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿಕಲಚೇತನರಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆ: ಅರ್ಜಿ ಆಹ್ವಾನ

ವಿಕಲಚೇತನರಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆ: ಅರ್ಜಿ ಆಹ್ವಾನ

ಮಂಗಳೂರು: 2025-26ನೇ ಸಾಲಿನಲ್ಲಿ ಮಂಗಳೂರು, ಉಳ್ಳಾಲ ಹಾಗೂ ಮೂಡಬಿದಿರೆ ತಾಲೂಕಿನ ಪಂಚಾಯತ್‍ಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್‍ಗೆ ಒಬ್ಬರಂತೆ ಎಸ್.ಎಸ್.ಎಲ್.ಸಿಯಲ್ಲಿ ಪಾಸ್/ಫೇಲ್ ಆದ ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ (ವಿ.ಆರ್.ಡಬ್ಲ್ಯೂ)  ನೇಮಕ  ಮಾಡಲು ಅವಕಾಶವಿದ್ದು 18-45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಸಿಕ ಗೌರವಧನ ರೂ.10 ಸಾವಿರ ನೀಡಲಾಗುತ್ತದೆ.

ಖಾಲಿ ಇರುವ ಹುದ್ದೆಗಳ ವಿವರ:-

ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಗ್ರಾಮ ಪಂಚಾಯತ್, ಮೂಡಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್, ಉಳ್ಳಾಲ ತಾಲೂಕಿನ ಅಂಬ್ಲಮೊಗರು, ಬೊಳಿಯಾರ್  ಗ್ರಾಮ ಪಂಚಾಯತ್‍ಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ (ವಿ.ಅರ್ ಡಬ್ಲ್ಯೂ)  ಹುದ್ದೆ ಖಾಲಿ ಇದ್ದು, ಆಸಕ್ತ ವಿಕಲಚೇತನರು ಆಗಸ್ಟ್ 12 ರೊಳಗೆ  ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಗೆ  ಮಂಗಳೂರು ಉರ್ವ ಮಾರ್ಕೆಟ್ ಬಿಲ್ಡಿಂಗ್‍ನ 3 ನೇ ಮಹಡಿಯಲ್ಲಿರುವ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ಕಚೇರಿಯಿಂದ ಪಡೆದು ಅರ್ಜಿ ಸಲ್ಲಿಸಬಹುದು.
 ಹೆಚ್ಚಿನ ಮಾಹಿತಿಗಾಗಿ ಮಂಗಳೂರು ತಾಲೂಕು ಪಂಚಾಯತ್ ಎಂ.ಆರ್.ಡಬ್ಲ್ಯೂ ಜಯಪ್ರಕಾಶ್ (ದೂರವಾಣಿ ಸಂಖ್ಯೆ 9110897458) ಸಂಪರ್ಕಿಸಬಹುದು ಎಂದು ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ