ಮಂಗಳೂರು: ಕೇಂದ್ರ ಸರಕಾರದ ಸ್ಟಾಪ್ ಸೆಲೆಕ್ಷನ್ ಕಮಿಷನ್ ವತಿಯಿಂದ 3131 ಹುದ್ದೆಗಳ ನೇಮಕಾತಿಗಾಗಿ ಕಂಬೈನ್ಸ್ ಹೈಯರ್ ಸೆಕೆಂಡರಿ (10+2) ಲೆವೆಲ್ ಎಕ್ಸಾಮಿನೇಷನ್ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸುತ್ತಿದ್ದು, ಈ ನೇಮಕಾತಿಯಲ್ಲಿ ಲೋವರ್ ಡಿವಿಷನ್ ಕ್ಲರ್ಕ್/ಜೂನಿಯರ್ ಸೆಕ್ರೇಟರಿಯೇಟ್ ಅಸಿಸ್ಟಂಟ್, ಡಾಟಾ ಎಂಟ್ರಿ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್ (ಗ್ರೇಡ್-ಎ) ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ನೇಮಕಾತಿಯ ವಿವರಗಳು:- ಅಭ್ಯರ್ಥಿಯು ಭಾರತೀಯ ನಾಗರೀಕನಾಗಿರಬೇಕು. ಡಾಟಾ ಎಂಟ್ರಿ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್ (ಗ್ರೇಡ್-ಎ) ಹುದ್ದೆಗಳಿಗೆ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಗಣಿತ ವಿಷಯದೊಂದಿಗೆ ಉತ್ತೀರ್ಣರಾಗಿರಬೇಕು. ಲೋವರ್ ಡಿವಿಷನ್ ಕ್ಲರ್ಕ್/ಜೂನಿಯರ್ ಸೆಕ್ರೆಟರೀಯೇಟ್ ಅಸಿಸ್ಟಂಟ್, ಡಾಟಾ ಎಂಟ್ರಿ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್ (ಗ್ರೇಡ್-ಎ) ಹುದ್ದೆಗಳಿಗೆ ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರಬೇಕು. ಕನಿಷ್ಠ 18 ರಿಂದ ಗರಿಷ್ಟ 27 ವರ್ಷದವರು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಪಿ.ಡಬ್ಲ್ಯು.ಡಿ ಹಾಗೂ ಇತರೆ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಅರ್ಜಿ ಶುಲ್ಕ: ರೂ. 100-/ (ಸೂಚನೆ: ಮಹಿಳಾ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿ.ಡಬ್ಲ್ಯು.ಡಿ ಹಾಗೂ ಮಾಜಿ ಸರ್ವಿಸ್‍ಮೆನ್‍ಗಳಿಗೆ ಶುಲ್ಕದಿಂದ ವಿನಾಯಿತಿಯಿದೆ.) ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 18. ಪ್ರಿಲಿಮಿನರಿ (ಪ್ರಾಥಮಿಕ) ಪರೀಕ್ಷೆ ನಡೆಯುವ ಸೆಪ್ಟೆಂಬರ್ 8 ಮತ್ತು ಸೆಪ್ಟೆಂಬರ್ 18. ಹೆಚ್ಚಿನ ಮಾಹಿತಿಗೆ ಹಾಗೂ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ವೆಬ್‍ಸೈಟ್ https://ssc.gov.in ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.