image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮೇದಾರ ಪರಿಶಿಷ್ಟ ವರ್ಗದವರಿಂದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಮೇದಾರ ಪರಿಶಿಷ್ಟ ವರ್ಗದವರಿಂದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ವರ್ಗದ ಮೇದಾ, ಮೇದಾರಿ, ಬುರುಡ್, ಗೌರಿಗ, ಮೇದಾರ, ಉಪಜಾತಿಗಳ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ನಿಗಮದ ಯೋಜನೆಗಳು/ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
 ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಪರಿಶಿಷ್ಟ ವರ್ಗದ ಮೇದಾ, ಮೇದಾರಿ, ಬುರುಡ, ಗೌರಿಗ, ಮೇದಾರ, ಉಪಜಾತಿಗಳ ಸಮುದಾಯದವರು ವಾಸವಾಗಿದ್ದಲ್ಲಿ, ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯಗಳನ್ನು ಪಡೆಯಲು  ಕೊಟ್ಟಾರದ ಅಬ್ಬಕ್ಕ ನಗರದಲ್ಲಿರುವ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಕಛೇರಿಯನ್ನು  ಸಂಪರ್ಕಿಸಬಹುದು ಎಂದು (ದೂರವಾಣಿ:0824-2451269) ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ