image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಗಸ್ಟ್ 11ರಿಂದ 22ರವರೆಗೆ ನಡೆಯಲಿದೆ ವಿಧಾನಸಭೆಯ ಮುಂಗಾರು ಅಧಿವೇಶನ- ಯು ಟಿ ಖಾದರ್

ಆಗಸ್ಟ್ 11ರಿಂದ 22ರವರೆಗೆ ನಡೆಯಲಿದೆ ವಿಧಾನಸಭೆಯ ಮುಂಗಾರು ಅಧಿವೇಶನ- ಯು ಟಿ ಖಾದರ್

ಮಂಗಳೂರು: ವಿಧಾನಸಭೆಯ ಮುಂಗಾರು ಅಧಿವೇಶನವು ಆಗಸ್ಟ್ 11ರಿಂದ 22ರವರೆಗೆ ನಡೆಯಲಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದರು. ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದ ಅವಧಿ ವಿಸ್ತರಣೆ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಕಮಿಟಿ ಚರ್ಚಿಸಿ ಅಂತಿಮಗೊಳಿಸುತ್ತದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಬದಲಾಯಿಸಿ 'ಮಂಗಳೂರು' ಎಂದು ಮರುನಾಮಕರಣ ಮಾಡಬೇಕೆಂಬ ವಿಚಾರ ಚರ್ಚೆಯಲ್ಲಿದೆ. ಹೆಸರಿನ ಹಿಂದೆ ಪರಂಪರೆ, ಇತಿಹಾಸ, ಸಂಸ್ಕೃತಿ ಎಲ್ಲವೂ ಅಡಕವಾಗಿರುತ್ತವೆ. ಹಿರಿಯರು, ಸಾಹಿತಿಗಳು, ಬರಹಗಾರರು, ತಜ್ಞರ ಜೊತೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಒಮ್ಮತದ ಅಭಿಪ್ರಾಯಕ್ಕೆ ಬರಬೇಕು. ಮಂಗಳೂರು ಅಭಿವೃದ್ಧಿಯಾಗಲು ಹೆಸರಿಗಿಂತ ಈ ನೆಲದಲ್ಲಿ ಸೌಹಾರ್ದ ವಾತಾವರಣ ಬೇಕು. ಅದಕ್ಕೆ ನಾವೆಲ್ಲರೂ ಪ್ರಯತ್ನಿಸಬೇಕು. ಹೆಸರಿಗಿಂತ ಪ್ರೀತಿ, ವಿಶ್ವಾಸ, ಭಯರಹಿತ, ದ್ವೇಷರಹಿತ ಸಮಾಜ ಮಂಗಳೂರಿಗೆ ಅತಿ ಅಗತ್ಯವಾಗಿದೆ. ಇದರ ಬಗ್ಗೆ ಚರ್ಚೆಯಾಗಲಿ' ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Category
ಕರಾವಳಿ ತರಂಗಿಣಿ