image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ

ಮಂಗಳೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಅಕ್ಟೋಬರ್ 1 ರಂದು  ರಾಜ್ಯ ಮಟ್ಟದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಲೆ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
    ರಾಜ್ಯ ಮಟ್ಟದಲ್ಲಿ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ  ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಹೀಗೆ ಒಟ್ಟು 7 ಪ್ರಶಸ್ತಿಗಳನ್ನು ನೀಡಲಾಗುತ್ತದೆ.  ಅರ್ಜಿಯನ್ನು  ಆಗಸ್ಟ್  25 ರೊಳಗೆ ಕೊಟ್ಟಾರದ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ  ಇಲಾಖೆಯ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು.
   ಹೆಚ್ಚಿನ ಮಾಹಿತಿಗೆ ಕಛೇರಿಯ ದೂರವಾಣಿ ಸಂಖ್ಯೆ: 0824-2458173, 2455999 ಅಥವಾ ಇಲಾಖೆಯ  ವೆಬ್‍ಸೈಟ್ www.dwdsc.karnataka.gov.in  ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ