image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಪ್ರಶಸ್ತಿ: ಅರ್ಜಿ ಆಹ್ವಾನ

ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಪ್ರಶಸ್ತಿ: ಅರ್ಜಿ ಆಹ್ವಾನ

ಮಂಗಳೂರು:   ಡಿಸೆಂಬರ್ 3 ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ  ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಮತ್ತು ವೈಯಕ್ತಿಕ ಪ್ರಶಸ್ತಿಗಳನ್ನು ರಾಜ್ಯ ಮಟ್ಟದಲ್ಲಿ ಆಯ್ಕೆ ಮಾಡಿ ವಿಶ್ವ ವಿಕಲಚೇತನ ದಿನಾಚರಣೆಯಂದು ಪ್ರಶಸ್ತಿಗಳನ್ನು ನೀಡಲು ಅರ್ಹರಿಂದ ಅರ್ಜಿ  ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಅರ್ಹ ಅಭ್ಯರ್ಥಿಗಳು ಕೊಟ್ಟಾರ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ  ಇಲಾಖೆಯ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
 ಹೆಚ್ಚಿನ ಮಾಹಿತಿಗೆ ಕಛೇರಿಯ ದೂರವಾಣಿ ಸಂಖ್ಯೆ: 0824-2458173 / 2455999 ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ