image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ: ಉದ್ವಿಗ್ನ ಪರಿಸ್ಥಿತಿ...

ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ: ಉದ್ವಿಗ್ನ ಪರಿಸ್ಥಿತಿ...

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಾಲ್ಕು ಮಂದಿ ಯೂಟ್ಯೂಬರ್ ಗಳ ಮೇಲೆ ಅಪರಿಚಿತರು ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದೆ. ಅಜಯ್ ಅಂಚನ್, ಅಭಿಷೇಕ್, ವಿಜಯ್ ಮತ್ತು ಇನ್ನೋರ್ವ ಹಲ್ಲೆಗೆ ಒಳಗಾದ ಯುಟ್ಯೂಬ‌ರ್ ಎಂದು ತಿಳಿದುಬಂದಿದೆ. ಹಲ್ಲೆ ನಡೆದ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಹಲ್ಲೆ ನಡೆಸಿದವರು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಹಲ್ಲೆಗೊಳಗಾದ ಯೂಟ್ಯೂಬರ್ ಗಳು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ಸಂದರ್ಭ ಸೌಜನ್ಯಾವಳ ಚಿಕ್ಕಪ್ಪನಿಗೆ ಸೇರಿದ ವಾಹನದ ಮೇಲು ಹಲ್ಲೆಯಾಗಿದೆ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಮಾಡಿದ್ದಾರೆ. ಇದರ‌ ನಡುವೆ ಉಜಿರೆಯ ಖಾಸಗಿ ಆಸ್ಪತ್ರೆ ಆವರಣದಲ್ಲಿ ಖಾಸಗಿ ಚಾನಲ್ ವರದಿಗಾರನ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಹಲ್ಲೆ ಮಾಡಿರುವ ಬಗ್ಗೆ ವರದಿಯಾಗಿದೆ.

Category
ಕರಾವಳಿ ತರಂಗಿಣಿ