ಮಂಗಳೂರು: ಕರಾವಳಿಯ ಅನೇಕರು ಸ್ವಾತಂತ್ರ್ಯ ಹೋರಾಟದಲ್ಲಿ ಕೊಡುಗೆ ನೀಡಿದ್ದಾರೆ. ಅವರನ್ನು ಸದಾ ಸ್ಮರಿಸಬೇಕಿದೆ. ಅದರಲ್ಲೂ ಸ್ವಾತಂತ್ರೋತ್ಸವ ಸಂದರ್ಭವಿಶೇಷವಾಗಿ ನೆನಪಿಸಿಕೊಳ್ಳಬೇಕಿದೆ. ರಾಷ್ಟ್ರಕ್ಕಾಗಿ ಕೆಲಸ ಮಾಡಲು ನಮಗೆ ಇದೆಲ್ಲಾ ಪ್ರೇರಣೆಯಾಗಲಿದೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು.
ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ನಗರದ ಬಾವುಟಗುಡ್ಡದ ಟಾಗೋರ್ ಪಾರ್ಕ್‌ನಲ್ಲಿ ನಡೆದ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಸ್ವಚ್ಛತೆ ಮತ್ತು ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಹರ್ ಘರ್ ತಿರಂಗ ಅಭಿಯಾನದ ಮೂಲಕ ಪ್ರತೀ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಕೆಲಸವಾಗುತ್ತದೆ. ಪ್ರಧಾನ ಮಂತ್ರಿಯ ಕರೆಯಂತೆ ಎಲ್ಲರೂ ಹರ್ ಘರ್ ತಿರಂಗ ಹಾರಿಸಲು ಕೈಜೋಡಿಸಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮಣೆ, ರಾಜ್ಯ ಮಾಧ್ಯಮ ಪ್ರಮುಖ್ ರತನ್ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಪೂರ್ಣಿಮಾ ರಾವ್, ಪ್ರಮುಖರಾದ ನಿತಿನ್ ಕುಮಾರ್, ನಾರಾಯಣ ಗಟ್ಟಿ, ಲಲ್ಲೆಶ್, ಸಂಧ್ಯಾ ವೆಂಕಟೇಶ್, ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕ ಉಸ್ತುವಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಪುತ್ತಿಲ, ಸದಸ್ಯರಾದ ಮಹೇಶ್ ಮೊಂಟಡ್ಕ ಯುವ ಮೋರ್ಚಾದ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮೋಹನ್ ಪೂಜಾರಿ, ಪ್ರವೀಣ್ ನಿಡ್ಡೆಲ್, ರವಿಚಂದ್ರ ಉಪಸ್ಥಿತರಿದ್ದರು.