image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಿ ಎಂ ಸ್ವನಿಧಿ ಸಾಲ ಯೋಜನೆಯನ್ನು ತಡೆಹಿಡಿದಿರುವ ಕ್ರಮವನ್ನು ವಿರೋಧಿಸಿ ಪ್ರತಿಭಟನೆ

ಪಿ ಎಂ ಸ್ವನಿಧಿ ಸಾಲ ಯೋಜನೆಯನ್ನು ತಡೆಹಿಡಿದಿರುವ ಕ್ರಮವನ್ನು ವಿರೋಧಿಸಿ ಪ್ರತಿಭಟನೆ

ಮಂಗಳೂರು: ಬೀದಿಬದಿ ವ್ಯಾಪಾರಿಗಳ ಸ್ವಾವಲಂಬಿ ಬದುಕಿಗಾಗಿ ಜಾರಿ ಮಾಡಿದ್ದ ಪಿ ಎಂ ಸ್ವನಿಧಿ ಸಾಲ ಯೋಜನೆಯನ್ನು ತಡೆಹಿಡಿದಿರುವ ಕ್ರಮವನ್ನು ವಿರೋಧಿಸಿ, ಬೀದಿಬದಿ ವ್ಯಾಪಾರಿಗಳ ಮೇಲಿನ ದಾಳಿ ದಬ್ಬಾಳಿಕೆ ಖಂಡಿಸಿ ಮಂಗಳವಾರ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (CITU) ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಎದುರು ಪ್ರತಿಭಟನಾ ಪ್ರದರ್ಶನ ನಡೆಯಿತು. ಪ್ರತಿಭಟನೆಗೂ ಮುನ್ನ ಬಲ್ಲಾಳ್ ಭಾಗ್ ನಿಂದ ಪಾಲಿಕೆ ಕಚೇರಿವರೆಗೆ ಬೀದಿ ವ್ಯಾಪಾರಿಗಳಿಂದ ಮೆರವಣಿಗೆ ನಡೆಯಿತು. ನೂರಾರು ಸಂಖ್ಯೆಯಲ್ಲಿಭಾಗವಹಿಸಿದ್ದ ಬೀದಿಬದಿ ವ್ಯಾಪಾರಿಗಳು, ಕೂಡಲೇ ಸ್ವನಿಧಿ ಸಾಲ ಯೋಜನೆ ಪುನರಾರಾಂಭಿಸಲು ಒತ್ತಾಯಿಸಿದರು. ಬಳಿಕ ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತರ ಮೂಲಕ ಜಿಲ್ಲಾಧಿಕಾರಿ ಹಾಗೂ ಆಡಳಿತಾಧಿಕಾರಿಗೆ ಮನವಿ ಸಲ್ಲಿಸಿದರು.

Category
ಕರಾವಳಿ ತರಂಗಿಣಿ