image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಟ್ರಾಫಿಕ್ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿ

ಟ್ರಾಫಿಕ್ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿ

ಮಂಗಳೂರು:  ಕರ್ನಾಟಕ ರಾಜ್ಯಪಾಲರ ಆದೇಶದನ್ವಯ ಸಾರಿಗೆ ಇಲಾಖೆಯಿಂದ ಹೊರಡಿಸಿರುವ ಆದೇಶದಂತೆ ಪೆÇಲೀಸ್ ಇಲಾಖೆಯ ಸಂಚಾರಿ  ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50 ರಷ್ಟು ರಿಯಾಯಿತಿ ನೀಡಲಾಗಿದೆ. ಈ ರಿಯಾಯಿತಿಯು ಮುಂಬರುವ ರಾಷ್ಟ್ರೀಯ ಲೋಕ ಅದಾಲತ್    ಸೆಪ್ಟೆಂಬರ್  13 ರ ಸಂಬಂಧ ಆದೇಶಿಸಲಾಗಿದ್ದು, ಆಗಸ್ಟ್ 23 ರಿಂದ  ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಶೇ.50 ರಿಯಾಯಿತಿಯಲ್ಲಿ ದಂಡ ಪಾವತಿಸುವ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Category
ಕರಾವಳಿ ತರಂಗಿಣಿ