ಮಂಗಳೂರು: ಕಳೆದ 26 ವರ್ಷಗಳಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಡೋರಿಕ್ ಸಿಕ್ವೇರಾ ಅವರು ಸರಕಾರಿ ಸೇವೆಯಿಂದ ಆಗಸ್ಟ್ 30ರಂದು ನಿವೃತ್ತರಾದರು.
ಇಲಾಖೆಯಲ್ಲಿ ಚಾಲಕರಾಗಿ 1999ರಲ್ಲಿ ನೇಮಕಗೊಂಡ ಅವರು, ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
ನಿವೃತ್ತಿ ಹಿನ್ನೆಲೆಯಲ್ಲಿ ಶನಿವಾರ ವಾರ್ತಾ ಇಲಾಖೆ ಕಚೇರಿಯಲ್ಲಿ ಡೋರಿಕ್ ಸಿಕ್ವೇರಾ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಸಮಾರಂಭದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಮಾತನಾಡಿ, ವಾರ್ತಾ ಇಲಾಖೆಯಲ್ಲಿ ಚಾಲಕರಾಗಿ ಡೋರಿಕ್ ಸಿಕ್ವೇರಾ ಅವರ ಸೇವೆ ಶ್ಲಾಘನೀಯ. ಪತ್ರಕರ್ತರೊಂದಿಗೆ ಉತ್ತಮ ಸಂಬಂಧ ಹೊಂದಿ, ಸರಕಾರಿ ಕಾರ್ಯಕ್ರಮಗಳಲ್ಲಿ ಮಾಧ್ಯಮ ನಿರ್ವಹಣೆಯಲ್ಲಿ ಅಹರ್ನಿಶಿ ದುಡಿದಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಹಿರಿಯ ಪತ್ರಕರ್ತ ಪುಷ್ಪರಾಜ್, ವಾರ್ತಾ ಇಲಾಖೆ ಸಿಬ್ಬಂಧಿಗಳು ಉಪಸ್ಥಿತರಿದ್ದರು.