image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸೆಪ್ಟೆಂಬರ್ 7 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಸೆಪ್ಟೆಂಬರ್ 7 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

 ಮಂಗಳೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ  ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ  ಇವರ ಸಹಕಾರದೊಂದಿಗೆ ಸೆಪ್ಟೆಂಬರ್ 7 ರಂದು  ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಸಂಜೆ 4  ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಲಿದೆ.

 ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ, ಆರೋಗ್ಯಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಚಲನಚಿತ್ರ ನಿರ್ದೇಶಕ  ಸ್ಮಿತೇಶ್ ಎಸ್ ಬಾರ್ಯ ಇವರು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಸಂದೇಶವನ್ನು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ