image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ : ಮಲ್ಪೆ ಬಂದರಿನ ಸಮೀಪದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರರೊಬ್ಬರು ಬೋಟಿನಿಂದ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಲಕ್ಷ್ಮೀ ಎಂಬವರ ಮಗ ಲೊಕೇಶ (36) ಎಂದು ಗುರುತಿಸಲಾಗಿದೆ.ಶಾಂತಿ ಎಂಬವರ ಜಲ ರಕ್ಷಾ ಹೆಸರಿನ ಮೀನುಗಾರಿಕೆ ಬೋಟಿನಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಸೆ.1ರಂದು ಬೆಳಗ್ಗೆ ಮೀನುಗಾರಿಕೆಗೆ ತೆರಳುವಾಗ ಬೋಟಿನ ಬಲೆಯನ್ನು ಬಿಡಿಸುತ್ತಿದ್ದರೆನ್ನಲಾಗಿದ್ದು, ಈ ವೇಳೆ ಅವರು ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಯಿಸಲಾಯಿತು. ಆದರೆ ಅವರು ಚಿಕಿಕತ್ಸೆ ಫಲಕಾರಿಯಾಗದೇ ಮೃತಪಟ್ಟರೆಂದು ತಿಳಿದುಬಂದಿದೆ.ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Category
ಕರಾವಳಿ ತರಂಗಿಣಿ