ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ, ರಥಬೀದಿ ಇವರ ಸಹಕಾರದೊಂದಿಗೆ ಸೆಪ್ಟೆಂಬರ್ 17 ರಂದು ಅಪರಾಹ್ನ 3.30 ಗಂಟೆಗೆ ನಗರದ ರಥಬೀದಿ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಸುರತ್ಕಲ್ ಗೋವಿಂದದಾಸ್ ಕಾಲೇಜಿನ ಪ್ರಾಂಶುಪಾಲ ಫ್ರೊ.ಹರೀಶ್ ಆಚಾರ್ಯ.ಪಿ ಇವರು ವಿಶ್ವಕರ್ಮ ಜಯಂತಿ ಸಂದೇಶವನ್ನು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.