image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಗೃಹರಕ್ಷಕರ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

ಗೃಹರಕ್ಷಕರ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

ಮಂಗಳೂರು- ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಮಂಗಳೂರು, ಉಳ್ಳಾಲ, ಪಣಂಬೂರು, ಸುರತ್ಕಲ್, ಮೂಲ್ಕಿ, ಮೂಡಬಿದ್ರಿ, ಬಂಟ್ವಾಳ, ವಿಟ್ಲ, ಪುತ್ತೂರು, ಕಡಬ, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಘಟಕಗಳಲ್ಲಿ ಖಾಲಿಯಿರುವ ಗೃಹರಕ್ಷಕರ ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
     ಎಸ್.ಎಸ್.ಎಲ್.ಸಿ. ಉತ್ತೀರ್ಣಗೊಂಡಿರುವ ಹಾಗೂ 19 ರಿಂದ 45 ವರ್ಷದ ಒಳಗಿರುವ, ದೈಹಿಕ ಸದೃಢತೆ ಹೊಂದಿರುವ ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಪಡೆಯಲು ಬರುವಾಗ ಆಧಾರ್ ಕಾರ್ಡ್ ಮತ್ತು ಮೂಲ ಎಸ್.ಎಸ್.ಎಲ್.ಸಿ ಅಂಕಪಟ್ಟಿಯನ್ನು ತರಬೇಕು.
 ನಗರದ  ಮೇರಿಹಿಲ್‍ನಲ್ಲಿರುವ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಿಂದ ಅರ್ಜಿಯನ್ನು ಸೆಪ್ಟೆಂಬರ್ 15 ರಿಂದ ಉಚಿತವಾಗಿ ಪಡೆಯಬಹುದು. ಅರ್ಜಿ  ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ.
  ಹೆಚ್ಚಿನ ಮಾಹಿತಿಗೆ ಕಛೇರಿ ದೂರವಾಣಿ ಸಂಖ್ಯೆ: 0824-2220562 ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ