image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತಣ್ಣೀರುಬಾವಿ ಬೀಚ್ ಸ್ವಚ್ಛತಾ ಅಭಿಯಾನ ಸೆ.20 ರಂದು

ತಣ್ಣೀರುಬಾವಿ ಬೀಚ್ ಸ್ವಚ್ಛತಾ ಅಭಿಯಾನ ಸೆ.20 ರಂದು

ಮಂಗಳೂರು: ಭಾರತ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಸುಸ್ಥಿರ ಕರಾವಳಿ ನಿರ್ವಹಣಾ ವಿಭಾಗ ಇವರ ನಿರ್ದೇಶನದಂತೆ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 7 ಗಂಟೆಯಿಂದ ನಗರದ ತಣ್ಣೀರುಬಾವಿ ಬೀಚ್‍ನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ/ ಅಭಿಯಾನವನ್ನು ಆಯೋಜಿಸಲಾಗಿದೆ.  
 ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳು ಹಾಗೂ ಶಿಕ್ಷಣ ಸಂಸ್ಥೆಗಳು  ಭಾಗವಹಿಸಲಿದ್ದು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ  ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಪ್ರಾದೇಶಿಕ ನಿರ್ದೇಶಕರು(ಪರಿಸರ) ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ