ಉಡುಪಿ : ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ.
ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದ್ದು. ಅ.3 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅ.7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅ.21 ರಂದು ಬೆಳಿಗ್ಗೆ 8 ಗಂಟೆಯಿಂದ 4 ಗಂಟೆಯವರೆಗೆ ಚುನಾವಣೆ ನಡೆಯಲಿದೆ. ಅ.21 ರಂದು ಫಲಿತಾಂಶ ಪ್ರಕಟವಾಗಲಿದೆ. ಇಂದಿನಿಂದ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
ಕೋಟಾ ಶ್ರೀನಿವಾಸ ಪೂಜಾರಿಯವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಗೆಲುವು ಕಂಡಿದ್ದರು.