ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಇಪ್ಕೋ ನವದೆಹಲಿಯ ನಿರ್ದೇಶಕ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು ಇದರ ನಿರ್ದೇಶಕ, ಮೆನೇಜಿಂಗ್ ಟ್ರಸ್ಟಿ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ)ನ ಮ್ಯಾನೇಜಿಂಗ್ ಟ್ರಸ್ಟಿ ಡಾ| ಎಂ. ಎನ್. ರಾಜೇಂದ್ರ ಕುಮಾರ್ ರವರಿಗೆ ವಿ ಆರ್ ಫ್ರೆಂಡ್ಸ್ ಯುನೈಟೆಡ್ ವತಿಯಿಂದ 'ಮಂಗಳೂರು ರತ್ನ ' ಪ್ರಶಸ್ತಿ ನೀಡಿ ಶನಿವಾರ ಎಸ್ ಸಿಡಿಸಿಸಿ ಬ್ಯಾಂಕ್ ಸೌಧದಲ್ಲಿ ಗೌರವಿಸಲಾಯಿತು.
ಈ ಸಂದರ್ಭ ದಲ್ಲಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್, ಉದ್ಯಮಿ ಜಯಪ್ರಕಾಶ್ ತುಂಬೆ, ವೀ ಆರ್ ಯುನೈಟೆಡ್ ಸಂಸ್ಥೆಯ ಅಧ್ಯಕ್ಷ ಆಜ್ಫರ್ ರಾಝಕ್, ಉಪಾಧ್ಯಕ್ಷ ಮನೋಜ್ ಕುಮಾರ್, ಕಾರ್ಯದರ್ಶಿ ನಿಶಾನ್ ಭಂಡಾರಿ, ಕೋಶಾಧಿಕಾರಿ ಸುದೇಶ್ ಭಂಡಾರಿ ಇರಾ, ಸಲಹೆಗಾರರಾದ ಶ್ರೀನಿವಾಸ್ ನಾಯಕ್ ಇಂದಾಜೆ, ದೀಪಕ್ ಪಿಲಾರ್, ನಿತಿನ್ ಶೆಟ್ಟಿ, ಸುಜಿತ್ ಭಂಡಾರಿ ಉಪಸ್ಥಿತರಿದ್ದರು.