image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಮಹಾ ಸಭೆ

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಮಹಾ ಸಭೆ

ಮಂಗಳೂರು: ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ( ನಿ)  ಮಂಗಳೂರು ಇದರ ವಾರ್ಷಿಕ ಮಹಾ ಸಭೆ  ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರ ಅಧ್ಯಕ್ಷತೆಯಲ್ಲಿ ಪತ್ರಿಕಾ ಭವನ ದಲ್ಲಿ  ಶನಿವಾರ ನಡೆಯಿತು.ಸಂಘದ ನಿರ್ದೇಶಕ ಪುಷ್ಪರಾಜ್ ವಾರ್ಷಿಕ ವರದಿ ಮಂಡಿಸಿದರು. ನಿರ್ದೇಶಕ ಇಬ್ರಾಹಿಂ ಅಡ್ಕಸ್ಥಳ ಲೆಕ್ಕಪತ್ರ ಮಂಡಿಸಿದರು. ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟಾ ವಂದಿಸಿದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಪಾಂಡುರಂಗ ಆಚಾರ್ಯ ಉಪಸ್ಥಿತರಿದ್ದರು.

ಪತ್ರಕರ್ತರಿಗೆ ನಿವೇಶನ ಒದಗಿಸುವ ದ್ರಷ್ಟಿಯಿಂದ ಖಾಸಗಿ ಸಂಸ್ಥೆಗಳೊಂದಿಗೆ  ಒಡಂಬಡಿಕೆ ಹಾಗೂ ಸರಕಾರಿ ಕಂದಾಯ ಭೂಮಿಯನ್ನು  ಖರೀದಿಸಿ ಸಂಘದ ಸದಸ್ಯರಿಗೆ ನಿವೇಶನ ಒದಗಿಸಲು ಪ್ರಯತ್ನಿಸಲಾಗುವುದು ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ  ಹೇಳಿದರು.ಇದೇ ವೇಳೆ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್ ಪಿ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ