image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕೆಲವು ಸಮಯಗಳಿಂದ ಕ್ಷೇತ್ರದ ಮೇಲೆ ಸತತವಾಗಿ ಆರೋಪಗಳು, ದ್ವೇಷಗಳು ಬರತೊಡಗಿತು. ಅದಕ್ಕೆ ಕಾರಣವೇನು ಎಂದು ನನಗೆ ಇದುವರೆಗೂ ತಿಳಿದಿಲ್ಲ- ವೀರೇಂದ್ರ ಹೆಗ್ಗಡೆ

ಕೆಲವು ಸಮಯಗಳಿಂದ ಕ್ಷೇತ್ರದ ಮೇಲೆ ಸತತವಾಗಿ ಆರೋಪಗಳು, ದ್ವೇಷಗಳು ಬರತೊಡಗಿತು. ಅದಕ್ಕೆ ಕಾರಣವೇನು ಎಂದು ನನಗೆ ಇದುವರೆಗೂ ತಿಳಿದಿಲ್ಲ- ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಕೆಲವು ಸಮಯಗಳಿಂದ ಕ್ಷೇತ್ರದ ಮೇಲೆ ಸತತವಾಗಿ ಆರೋಪಗಳು, ದ್ವೇಷಗಳು ಬರತೊಡಗಿತು. ಅದಕ್ಕೆ ಕಾರಣವೇನು ಎಂದು ನನಗೆ ಇದುವರೆಗೂ ತಿಳಿದಿಲ್ಲ. ಎಂದು ಡಾ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು

ಹಿತರಕ್ಷಣಾ ಸಮಿತಿ ಮತ್ತು ಧರ್ಮಸ್ಥಳ ಭಕ್ತರಿಂದ ಕ್ಷೇತ್ರದಲ್ಲಿ ನಡೆದ ವಿಶೇಷ ಪ್ರಾರ್ಥನೆಯ ನಂತರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ  ಡಾ. ಡಿ ವೀರೇಂದ್ರ ಹೆಗ್ಗಡೆಯವರು “ಊರವರ, ಕ್ಷೇತ್ರದ ಭಕ್ತರೆಲ್ಲರ ಪ್ರೀತಿ ವಿಶ್ವಾಸಗಳು ನಮ್ಮನ್ನು ಜೀವಂತವಾಗಿರಿಸಿದೆ. ಇದರಿಂದಾಗಿ ಇನ್ನೂ ಹೆಚ್ಚು-ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸೇವೆ ಮಾಡಬೇಕೆಂಬ ಚೈತನ್ಯ ಮೂಡುತ್ತಿದೆ. ಕೆಲವು ಸಮಯಗಳಿಂದ ಕ್ಷೇತ್ರದ ಮೇಲೆ ಸತತವಾಗಿ ಆರೋಪಗಳು, ದ್ವೇಷಗಳು ಬರತೊಡಗಿತು. ಅದಕ್ಕೆ ಕಾರಣವೇನು ಎಂದು ನನಗೆ ಇದುವರೆಗೂ ತಿಳಿದಿಲ್ಲ. ಈಗ ಸರಕಾರ ನಡೆಸುತ್ತಿರುವ ತನಿಖೆಯಲ್ಲಿ ಸತ್ಯಗಳು ಹೊರ ಬರುತ್ತಿವೆ. ನಮ್ಮಿಂದ ಯಾವ ತಪ್ಪುಗಳು ನಡೆದಿಲ್ಲ ಎಂದು ತಿಳಿಯುತ್ತಿದೆ ಎಂದು ಹೇಳಿದರು.

ಇದುವರೆಗೂ ಅನೇಕರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಕ್ಷೇತ್ರದ ಜೊತೆಗೆ ಇದ್ದೇವೆ ಎಂದು ಹೇಳಿದ್ದಾರೆ. ಊರವರೂ ಕೂಡ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಾ ಕ್ಷೇತ್ರದ ಕಾರ್ಯಗಳಿಗೆ ಬೆಂಬಲವಾಗಿ ನಿಂತಿದ್ದಾರೆ. ನಿಮ್ಮೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಪ್ರೀತಿ, ವಿಶ್ವಾಸಗಳು ಹೀಗೆಯೇ ಇರಲಿ ಎಂದರು.

ಸಿದ್ಧಗಂಗಾ ಮಠದ ಸ್ವಾಮಿಯವರ ಕೃತಿಯನ್ನು ಓದುತ್ತಿದ್ದೆ. ಒಂದು ಕಡೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮೂಹಿಕ ವಿವಾಹ ಹಾಗೂ ಅನೇಕ ಯೋಜನೆಗಳ ಬಗೆ ಮೆಚ್ಚುಗೆ ಮಾತುಗಳನ್ನು ಆಡಿರುವುದನ್ನು ನೋಡಿದೆ. ತುಂಬಾ ಸಂತೋಷವಾಯಿತು. ಶ್ರೀ ಕ್ಷೇತ್ರದ ಮೂಲಕ ಇಂತಹ ಸೇವಾ ಕಾರ್ಯ ನೆರವೇರಲು ನಾನು ನಿಮಿತ್ತ ಮಾತ್ರ ಆಗಿದ್ದೇನೆ.  ಶ್ರೀ ಸ್ವಾಮಿಯ ಅನುಗ್ರಹ, ನಿಮ್ಮೆಲ್ಲರ ಹಾರೈಕೆ ಹಾಗೂ ಕುಟುಂಬಸ್ಥರ ಸಹಕಾರದಿಂದ ಗ್ರಾಮೀಣಾಭಿವೃದ್ದಿ, ವಿದ್ಯಾಸಂಸ್ಥೆ, ಆಸ್ಪತ್ರೆ ಮುಂತಾದ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮುನ್ನಡೆಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

Category
ಕರಾವಳಿ ತರಂಗಿಣಿ