image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಎಂ.ಎಸ್.ಎಂ.ಇಗಳಿಗೆ ಟೆಕ್ನಾಲಜಿ ಕ್ಲಿನಿಕ್ ಕಾರ್ಯಾಗಾರ...

ಎಂ.ಎಸ್.ಎಂ.ಇಗಳಿಗೆ ಟೆಕ್ನಾಲಜಿ ಕ್ಲಿನಿಕ್ ಕಾರ್ಯಾಗಾರ...

ಮಂಗಳೂರು: ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ವೇಗಗೊಳಿಸುವ ನಿಟ್ಟಿನಲ್ಲಿ  ರ್ಯಾಂಪ್  ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು ಹಾಗೂ ಕೆನರಾ ಪ್ಲಾಸ್ಟಿಕ್ ಮ್ಯಾನ್ಯೂಫ್ಯಾಕ್ಚರರ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ಟೆಕ್ನಾಲಜಿ ಕ್ಲಿನಿಕ್  ಕಾರ್ಯಾಗಾರವನ್ನು ಜಿಲ್ಲೆಯ  ಎಂ.ಎಸ್.ಎಂ.ಇ  ಉದ್ಯಮಿಗಳಿಗೆ ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯಾ, ಕೆನರಾ ಸಣ್ಣ ಕೈಗಾರಿಕಾ ಸಂಘದ ಸಭಾಭವನದಲ್ಲಿ  ಅಕ್ಟೋಬರ್ 9 ಮತ್ತು 10 ರಂದು ಬೆಳಿಗ್ಗೆ  10 ಗಂಟೆಯಿಂದ ಅಪರಾಹ್ನ 5 ಗಂಟೆಯವರೆಗೆ ಆಯೋಜಿಸಲಾಗಿದೆ.
 ಈ ಕಾರ್ಯಾಗಾರದಲ್ಲಿ ನೋಂದಾಯಿತ ಎಂ.ಎಸ್.ಎಂ.ಇಗಳು ಭಾಗವಹಿಸಬಹುದು.  ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ ದೂರವಾಣಿ ಸಂಖ್ಯೆ: 0824-2214021 ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ