image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬೋಳೂರು ಹಿಂದೂ ರುದ್ರಭೂಮಿಗೆ ಭೇಟಿ ನೀಡಿ, ಸಮಸ್ಯೆ ಆಲಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಬೋಳೂರು ಹಿಂದೂ ರುದ್ರಭೂಮಿಗೆ ಭೇಟಿ ನೀಡಿ, ಸಮಸ್ಯೆ ಆಲಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಇಂದು ಮಂಗಳೂರು ನಗರದ ಬೋಳೂರಿನಲ್ಲಿರುವ ಹಿಂದೂ ರುದ್ರಭೂಮಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. 

ಬೋಳೂರಿನ ಈ ವಿದ್ಯುತ್‌ ಚಿತಾಗಾರವು ಮಂಗಳೂರಿನ ಜನತೆ ಪಾಲಿಗೆ ಪ್ರಮುಖ ಹಿಂದೂ ರುದ್ರಭೂಮಿಯಾಗಿದೆ. ಸುತ್ತ-ಮುತ್ತಲಿನ ಸುಮಾರು ಹತ್ತು ವಾರ್ಡ್‌ಗಳ ಜನರು ಈ ರುದ್ರಭೂಮಿಯನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಶವ ಸಂಸ್ಕಾರ ಮಾಡುವುದಕ್ಕೆ ಮೂಲಭೂತವಾಗಿ ಏನೆಲ್ಲ ಸಮಸ್ಯೆಗಳು ಎದುರಾಗುತ್ತಿವೆ ಎನ್ನುವುದರ ಬಗ್ಗೆ ಸಂಸದ ಕ್ಯಾ. ಚೌಟ ಅವರು ಸ್ಥಳೀಯರ ಅಭಿಪ್ರಾಯವನ್ನು ಪಡೆದುಕೊಂಡರು. 

ಸಂಸದರ ಭೇಟಿ ವೇಳೆ ಸ್ಥಳೀಯ ಮ.ನ.ಪಾ ಸದಸ್ಯರಾದ ಜಗದೀಶ್ ಶೆಟ್ಟಿ ಮತ್ತು ಬಿಜೆಪಿಯ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ