image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ 2024

ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ 2024

ಮಂಗಳೂರು - ಭಾರತ  ಸರ್ಕಾರದ ಭೂ ವಿಜ್ಞಾನ ಸಚಿವಾಲಯದ ರಾಷ್ಟ್ರೀಯ ಕರಾವಳಿ ಸಂಶೋಧನಾ ಕೇಂದ್ರ, ಚೆನೈ ಇವರ ಸೂಚನೆಯಂತೆ ನಗರದ ಮೀನುಗಾರಿಕಾ ಮಹಾವಿದ್ಯಾಲಯದ ವತಿಯಿಂದ ಸೋಮೇಶ್ವರ ಕಡಲ ತೀರದಲ್ಲಿ ಶನಿವಾರ ಅಂತರಾಷ್ಟ್ರೀಯ ಕರಾವಳಿ  ಸ್ವಚ್ಛತಾ ದಿನ ಕಾರ್ಯಕ್ರಮ ನಡೆಯಿತು. ಇದರಲ್ಮೀಲಿ ನುಗಾರಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದ ಭಾಗವಹಿಸಿದ್ದರು.. ವಿದ್ಯಾರ್ಥಿಗಳು ಸ್ವಚ್ಛತೆ ಮತ್ತು ಪರಿಸರದ ಪ್ರಾಮುಖ್ಯತೆಯನ್ನು ತಿಳಿಸಲು ಸ್ವಚ್ಛತಾ ಅಭಿಯಾನವನ್ನು ನಡೆಸಿದರು. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಮೀನುಗಾರಿಕಾ ಮಹಾವಿದ್ಯಾಲಯದ ಡೀನ್ ಡಾ. ಹೆಚ್. ಎನ್. ಆಂಜನೇಯಪ್ಪ ವಹಿಸಿದ್ದರು. ಸೋಮೇಶ್ವರ ಪುರಸಭೆಯ ಸದಸ್ಯರಾದ ದೀಪಕ್ ಪಿಲಾರ್ ಮತ್ತು ಸೋಮನಾಥ ದೇವಾಲಯದ ಸದಸ್ಯರಾದ  ಭಾಸ್ಕರ್ ಗಟ್ಟಿ, ಡಾ. ಶಿವಕುಮಾರ ಮಗದ,  ಸಂಯೋಜಕರಾದ ಡಾ. ಎಸ್. ಆರ್. ಸೋಮಶೇಖರ, ಮತ್ತು ಡಾ.ಮೃದುಲ ರಾಜೇಶ್, ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ