image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೆ ಅವಧಿಯ ಆಡಳಿತ ಮಂಡಳಿ ಚುನಾವಣೆಗೆ ಸೋಮವಾರ ಅಧಿಸೂಚನೆ ಪ್ರಕಟಗೊಂಡಿದೆ.
ಅಕ್ಟೋಬರ್ 19 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, (ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ) ನಾಮಪತ್ರ ಸಲ್ಲಿಸಲು ಅಕ್ಟೋಬರ್ 27 ಕೊನೆಯ ದಿನ. ಅಕ್ಟೋಬರ್ 28 ರಂದು ನಾಮಪತ್ರಗಳ ಪರಿಶೀಲನೆ, ಅ. 30 ರಂದು  ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ.
ನವೆಂಬರ್ 9 ರಂದು  ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆವರೆಗೆ  ವಾರ್ತಾ ಭವನದಲ್ಲಿ  ಮತದಾನ ನಡೆಯಲಿದೆ. ಬಳಿಕ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಮತದಾರರ ಪಟ್ಟಿಯನ್ನು  ವಾರ್ತಾಭವನದಲ್ಲಿ ಪ್ರಕಟಿಸಲಾಗಿದೆ  ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿ, ವಾರ್ತಾಧಿಕಾರಿ  ಬಿ.ಎ ಖಾದರ್ ಶಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ