image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪುತ್ತೂರು ತಾಲೂಕಿನಲ್ಲಿ ಎರಡು ಗ್ರಾಮ ಪಂಚಾಯತಿಗಳಿಗೆ ಶಾಸಕರ ಭೇಟಿ: ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಮತ್ತು ಸಾರ್ವಜನಿಕರಿಂದ ಮನವಿ ಸ್ವೀಕಾರ

ಪುತ್ತೂರು ತಾಲೂಕಿನಲ್ಲಿ ಎರಡು ಗ್ರಾಮ ಪಂಚಾಯತಿಗಳಿಗೆ ಶಾಸಕರ ಭೇಟಿ: ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಮತ್ತು ಸಾರ್ವಜನಿಕರಿಂದ ಮನವಿ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಜತ್ತೂರು ಮತ್ತು ಬನ್ನೂರು ಗ್ರಾಮ ಪಂಚಾಯತಿಗಳಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಸಂಸ್ಥೆಯ ಚುನಾಯಿತ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು  ಭೇಟಿ ನೀಡಿ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಮತ್ತು ಅಧಿಕಾರಿಗಳೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿ ಕುರಿತು ಪರಿಶೀಲನೆ ನಡೆಸಿದರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಜತ್ತೂರು ಗ್ರಾಮ ಪಂಚಾಯತ್ ಭೇಟಿ

ಭೇಟಿಯ ವೇಳೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA), ಪ್ರಧಾನ ಮಂತ್ರಿ ಆವಾಸ್ ಯೋಜನೆ, 15ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM), ಜಲಜೀವನ್ ಮಿಷನ್ (JJM) ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿಯನ್ನು ವಿಶ್ಲೇಷಿಸಲಾಯಿತು.

ಅದೇ ರೀತಿ ನಮೂನೆ 9, 11A, 11B ಪ್ರಮಾಣಪತ್ರ ವಿತರಣೆ, ಕಟ್ಟಡ ತೆರಿಗೆ ಸಂಗ್ರಹಣೆ, ವಾರ್ಡ್ ಮತ್ತು ಗ್ರಾಮ ಸಭೆ ಆಯೋಜನೆ, ಸ್ವಾಧೀನ ಪ್ರಮಾಣ ಪತ್ರ ನೀಡುವ ವಿಧಾನಗಳು, ಗ್ರಾಮ ಅಭಿವೃದ್ಧಿ ಅಡಚಣೆಗಳು ಮುಂತಾದ ವಿಷಯಗಳ ಕುರಿತು ಚರ್ಚಿಸಲಾಯಿತು.ಬಜತ್ತೂರು ಪಂಚಾಯತಿ MGNREGA ಮತ್ತು ಜಲಜೀವನ್ ಮಿಷನ್ ಯೋಜನೆಗಳ ಅನುಷ್ಠಾನದಲ್ಲಿ ಉತ್ತಮ ಪಾರದರ್ಶಕತೆ ಮತ್ತು ಪ್ರಗತಿಯನ್ನು ಸಾಧಿಸಿದೆ ಎಂದು ಶಾಸಕರು ಪ್ರಶಂಸಿಸಿದರು.ಗ್ರಾಮದ ಎಲ್ಲಾ ಮನೆಗಳಿಂದ ಒಣಕಸದ ಸಂಗ್ರಹಣೆ ಮತ್ತು ವಿಲೇವಾರಿ ಕ್ರಮವನ್ನು ಮತ್ತಷ್ಟು ಬಲಪಡಿಸಿ SBM ಯೋಜನೆಯನ್ನು ಯಶಸ್ವಿಗೊಳಿಸಲು ಸೂಚಿಸಲಾಯಿತು.

ಬನ್ನೂರು ಗ್ರಾಮ ಪಂಚಾಯತ್ ಭೇಟಿ 

ಬನ್ನೂರು ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ MGNREGA, ಪ್ರಧಾನ ಮಂತ್ರಿ ಆವಾಸ್ ಯೋಜನೆ, 15ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್, ಜಲಜೀವನ್ ಮಿಷನ್, ಬಸವ ವಸತಿ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಗಳ ಪ್ರಗತಿ ಕುರಿತು ಚರ್ಚಿಸಲಾಯಿತು.

ವಿನ್ಯಾಸ ನಕ್ಷೆ ಅನುಮೋದನೆ, ನಮೂನೆ 9, 11A, 11B ವಿತರಣೆ, ಕಟ್ಟಡ ತೆರಿಗೆ ಸಂಗ್ರಹಣೆ ಮತ್ತು ರಸ್ತೆ ಸ್ವಾಧೀನ ಅಡಚಣೆಗಳ ಕುರಿತೂ ಶಾಸಕರು ವಿಚಾರಿಸಿದರು.ಬನ್ನೂರು ಪಂಚಾಯತಿ MGNREGA ಮತ್ತು 15ನೇ ಹಣಕಾಸು ಅನುದಾನದ ಅನುಷ್ಠಾನದಲ್ಲಿ ಸಾಧಿಸಿರುವ ಪಾರದರ್ಶಕ ಆಡಳಿತ ಮತ್ತು ಉತ್ಸಾಹದ ಕಾರ್ಯವೈಖರಿ ಕುರಿತು ಶಾಸಕರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ಗ್ರಾಮೀಣ ನಾಗರಿಕರು ತಮ್ಮ ನಿವೇಶನಗಳ ವಿನ್ಯಾಸ ನಕ್ಷೆ ಅನುಮೋದನೆಗೆ ನಗರ ಯೋಜನಾ ಪ್ರಾಧಿಕಾರಕ್ಕೆ ಹೋಗಬೇಕಾದ ಅಸೌಕರ್ಯ ಮತ್ತು ಮಧ್ಯವರ್ತಿಗಳ ಹಾವಳಿ ಕುರಿತು ಮನವಿ ಸಲ್ಲಿಸಿದರು.

ಈ ಹಿನ್ನೆಲೆಯಲ್ಲಿ ವಿನ್ಯಾಸ ಅನುಮೋದನೆ ಅಧಿಕಾರವನ್ನು ಗ್ರಾಮ ಪಂಚಾಯತಿಗಳೇ ನೀಡುವಂತಾಗುವಂತೆ ರಾಜ್ಯ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಕೈಗೊಳ್ಳುವುದಾಗಿ ಶಾಸಕರು ಭರವಸೆ ನೀಡಿದರು.

ಅದೇ ರೀತಿ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಶಾಸಕರು ನೇರವಾಗಿ ಸ್ವೀಕರಿಸಿ, ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸದಸ್ಯರು, ಮಾಜಿ ಸದಸ್ಯರು, ಗ್ರಂಥಪಾಲಕರು, ಗ್ರಾಮ ನಾಗರಿಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ