image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಖಾದಿ ಉತ್ಪಾದನಾ ಕೇಂದ್ರಕ್ಕೆ ಕ್ರಮ: ಶಾಸಕ ವೇದವ್ಯಾಸ ಕಾಮತ್

ಮಂಗಳೂರಿನಲ್ಲಿ ಖಾದಿ ಉತ್ಪಾದನಾ ಕೇಂದ್ರಕ್ಕೆ ಕ್ರಮ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ಎರಡು ಖಾದಿ ಉತ್ಪಾದನಾ ಕೇಂದ್ರಗಳನ್ನು ಮಂಗಳೂರಿನಲ್ಲಿಯೂ ಆರಂಭಿಸಲು ಕ್ರಮ ವಹಿಸಲಾಗುವುದು ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದ್ದಾರೆ. ನಗರದ  ದಿ ಭಾರತ್ ಸೈಟ್ಸ್ ಆ್ಯಂಡ್ ಗೈಡ್ಸ್ ಸಭಾಂಗಣದಲ್ಲಿಆಯೋಜಿಸಲಾಗಿದ್ದ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ 'ಖಾದಿ ಉತ್ಸವ -2025'ನ್ನು  ಉದ್ಘಾಟಿಸಿ ಅವರು ಮಾತನಾಡಿದರು. 

ಮಂಡಳಿಯ ಅಧ್ಯಕ್ಷ, ಶಾಸಕ ಬಸನಗೌಡ ತುರುವಿಹಾಳ ಅವರು ಮಾತನಾಡಿ, ಖಾದಿ ಕೇಂದ್ರ ಸ್ಥಾಪನೆಗೆ ಪಿಎಂಇಜಿಪಿ ಯೋಜನೆಯಡಿ ಸಹಾಯಧನದೊಂದಿಗೆ ಸಾಲ ಸೌಲಭ್ಯ ರಾಜ್ಯ ಸರಕಾರದಿಂದ ನೆರವು ಒದಗಿಸಲಾಗುತ್ತದೆ ಎಂದು ತಿಳಿಸಿದರು.

ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಖಾದಿ ಉತ್ಸವದಲ್ಲಿ 42 ಖಾದಿ ಸಂಘಗಳು ಹಾಗೂ 24 ಗ್ರಾಮೀಣ ಕೈಗಾರಿಕೆಗಳ ಕಸುಬುದಾರರು ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರರಾಜ್ಯಗಳಿಂದ ಭಾಗವಹಿಸಿದ್ದಾರೆ.

66 ಮಳಿಗೆಗಳನ್ನು ತೆರೆಯಲಾಗಿದೆ. ಉತ್ಸವ ಅ.24ರವರೆಗೆ ಇರಲಿದ್ದು, ಪ್ರದರ್ಶನದಲ್ಲಿ ಸಂಘ ಸಂಸ್ಥೆಗಳು ಉತ್ಪಾದಿಸಿರುವ ಅರಳೆ ಖಾದಿ, ರೇಷ್ಮೆ ಖಾದಿ, ಉಣ್ಣೆ ಬಟ್ಟೆಗಳು, ಶರ್ಟ್‌ಗಳು, ಕುರ್ತಗಳು, ಕಸೂತಿ ಬಟ್ಟೆಗಳು ಶೇ. 20ರಿಂದ ಶೇ.35ರವರೆಗೆ ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ಲಭ್ಯವಿವೆ.

Category
ಕರಾವಳಿ ತರಂಗಿಣಿ