image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರೆಡ್‌ಕ್ರಾಸ್ ರಾಷ್ಟ್ರೀಯ ಆಡಳಿತ ಮಂಡಳಿ ಸದಸ್ಯರಾಗಿ ಸಿಎ ಶಾಂತರಾಮ ಶೆಟ್ಟಿ ಆಯ್ಕೆ

ರೆಡ್‌ಕ್ರಾಸ್ ರಾಷ್ಟ್ರೀಯ ಆಡಳಿತ ಮಂಡಳಿ ಸದಸ್ಯರಾಗಿ ಸಿಎ ಶಾಂತರಾಮ ಶೆಟ್ಟಿ ಆಯ್ಕೆ

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ಆಡಳಿತ ಮಂಡಳಿ (ನ್ಯಾಶನಲ್ ಮ್ಯಾನೇಜಿಂಗ್ ಬಾಡಿ) ಸದಸ್ಯರಾಗಿ  ಮಂಗಳೂರಿನ ಸಿಎ ಶಾಂತರಾಮ ಶೆಟ್ಟಿ ಚುನಾಯಿತರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಆಗಿರುವ ಸಿಎ ಶಾಂತರಾಮ ಶೆಟ್ಟಿ ಅವರು ರಾಷ್ಟ್ರೀಯ ಮಂಡಳಿ ಚುನಾವಣೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.

ನವದೆಹಲಿಯಲ್ಲಿ ನಡೆದ ಚುನಾವಣೆಯಲ್ಲಿ ದೇಶದ 26 ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಒಟ್ಟು 12 ಮಂದಿಗೆ ರಾಷ್ಟ್ರೀಯ ಮಂಡಳಿಗೆ ಆಯ್ಕೆಯಾಗಲು ಅವಕಾಶ ಇತ್ತು. ಸಿಎ ಶಾಂತರಾಮ ಶೆಟ್ಟಿ ಅವರು ಅತೀ ಹೆಚ್ಚು 22 ಮತ ಪಡೆದು ದಕ್ಷಿಣ ವಲಯದಿಂದ ಆಯ್ಕೆಯಾದರು.

ದ.ಕ.ಜಿಲ್ಲಾ ರೆಡ್‌ಕ್ರಾಸ್‌ನ  80 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲಾ ಚೇರ್ಮನ್‌ಗೆ ರಾಷ್ಟ್ರೀಯ ನಿರ್ವಹಣಾ ಮಂಡಳಿಗೆ ಆಯ್ಕೆಯಾಗುವ ಅವಕಾಶ ದೊರೆತಿದೆ. ಪ್ರಸ್ತುತ ರೆಡ್‌ಕ್ರಾಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಕಾರ್ಯ ನಿರ್ವಹಿಸುತ್ತಿದ್ದಾರೆ.

22 ರಾಜ್ಯಗಳ ಪ್ರತಿನಿಧಿಗಳು  ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ಯಾವುದೇ ಚ್ಯುತಿಯಾಗದಂತೆ ಕಾರ್ಯ ನಿರ್ವಹಿಸುತ್ತೇನೆ. ಮುಂದಿನ ದಿನಗಳಲ್ಲಿ ನಮ್ಮ ರಾಜ್ಯ ಹಾಗೂ ಎಲ್ಲ ಜಿಲ್ಲಾ ರೆಡ್‌ಕ್ರಾಸ್ ಘಟಕಗಳಿಗೆ  ರಾಷ್ಟ್ರೀಯ ಕಚೇರಿಯ ಮೂಲಕ ಅಗತ್ಯ ಸೇವೆಗಳನ್ನು ತಲುಪಿಸುವುದು ನನ್ನ ಉದ್ದೇಶ. ಇದು ನನ್ನ ಸಮಾಜಸೇವೆಯ ಮಾರ್ಗದಲ್ಲಿನ ದೊಡ್ಡ ಮೈಲುಗಲ್ಲು ಎಂದು ಸಿಎ ಶಾಂತರಾಮ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.

Category
ಕರಾವಳಿ ತರಂಗಿಣಿ