image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಿಲ್ಲವ ಮಹಾಮಂಡಲದ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

ಬಿಲ್ಲವ ಮಹಾಮಂಡಲದ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

ಮಂಗಳೂರು:  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲ್ಕಿಯ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಗೆ ಬಿಲ್ಲವ ಮಹಾ ಮಂಡಲದ ಅಧ್ಯಕ್ಷರು ಮತ್ತು ಭಾರತ್ ಕೋಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ  ಸೂರ್ಯಕಾಂತ್ ಜೆ ಸುವರ್ಣ ಇವರು ಭೇಟಿ ನೀಡಿದ ಸಂದರ್ಭ ಅವರನ್ನು ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಮತ್ತು ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

ಸೂರ್ಯಕಾಂತ್ ಜೆ ಸುವರ್ಣ ಅವರು ಬಿಲ್ಲವ ಮಹಾಮಂಡಲದ ಅಧ್ಯಕ್ಷರಾಗಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಪೋಷಕರಾದ ಗಿರೀಶ್ ಶೆಟ್ಟಿ ತೆಳ್ಳಾರ್, ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಕಂಟ್ರಾಕ್ಟರ್ ಶಿವಪ್ರಸಾದ ರೈ, ರವಿರಾಜ್ ಶೆಟ್ಟಿ ಜತ್ತಬೆಟ್ಟು, ಸೂರ್ಯಕಾಂತ್ ಸುವರ್ಣ ರವರ ಅಭಿಮಾನಿಗಳಾದ ಮೋಹನ್ ಕೋಟ್ಯಾನ್, ಯೋಗೀಶ್ ಕೋಟ್ಯಾನ್, ಭಾಸ್ಕರ್ ಸಾಲ್ಯಾನ್ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ