image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಾಳೆ ತುಳು ಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರೊಂದಿಗೆ ಮಾತುಕತೆ

ನಾಳೆ ತುಳು ಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರೊಂದಿಗೆ ಮಾತುಕತೆ

ಮಂಗಳೂರು: ತುಳುನಾಡಿನ ಜಾನಪದ ಕ್ಷೇತ್ರದ ಸಾಧನೆಗಾಗಿ ಈ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉಮೇಶ್ ಪಂಬದ ಗಂಧಕಾಡು ಹಾಗೂ  ಕಲಾವಿದರಾದ ಸಿಂಧೂ ಗುಜರನ್ ಅವರೊಂದಿಗೆ ಮಾತುಕತೆ ಕಾರ್ಯಕ್ರಮ ನ.8 ರಂದು  ಮಧ್ಯಾಹ್ನ 2:30 ಗಂಟೆಗೆ ಮಂಗಳೂರಿನ ತುಳು ಭವನದಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಹಯೋಗದಲ್ಲಿ  ನಡೆಯುವ ಈ ಕಾರ್ಯಕ್ರಮವನ್ನು  ಶನಿವಾರ ‌ಅಪರಾಹ್ನ 2.30 ಕ್ಕೆ  ಉಡುಪಿ ಡಾ.ಶಿವರಾಮ ಕಾರಂತ ಟ್ರಸ್ಟ್ ನ ನಿರ್ದೇಶಕ ಡಾ.ಗಣನಾಥ ಎಕ್ಕಾರು  ಉದ್ಘಾಟಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್   ಅಧ್ಯಕ್ಷತೆ ವಹಿಸುವರು. 

ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ವಾಸುದೇವ ಬೆಳ್ಳೆ  ಸಂವಾದ ಕಾರ್ಯಕ್ರಮದ ಸಮನ್ವಯಕಾರರಾಗಿ ಭಾಗವಹಿಸುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

Category
ಕರಾವಳಿ ತರಂಗಿಣಿ