ಮಂಗಳೂರು: ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪತ್ರಕರ್ತರ ಗ್ರಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ನಿರ್ದೇಶಕ, ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ರಂಗದ ಸಾಧಕ ಪ್ರಶಸ್ತಿ ಪುರಸ್ಕಾರ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಕೆ ಎಂ ಎಫ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಕಾಪು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿ ಕುಮಾರ್ ರೈ ಬಲ್ಯೊಟ್ಟು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.