image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಡಿಸೆಂಬರ್ ನಲ್ಲಿ ಮಂಗಳೂರು ಫುಟ್ಬಾಲ್ ಕ್ರೀಡಾಂಗಣ ಉದ್ಘಾಟನೆ ಮಾಡಲಾಗುವುದು : ಯು.ಟಿ.ಖಾದರ್

ಡಿಸೆಂಬರ್ ನಲ್ಲಿ ಮಂಗಳೂರು ಫುಟ್ಬಾಲ್ ಕ್ರೀಡಾಂಗಣ ಉದ್ಘಾಟನೆ ಮಾಡಲಾಗುವುದು : ಯು.ಟಿ.ಖಾದರ್

ಮಂಗಳೂರು: ನಗರದ ನೆಹರೂ ಮೈದಾನದ ಫುಟ್ಬಾಲ್ ಕ್ರೀಡಾಂಗಣದ ಕಾಮಗಾರಿಯನ್ನು ರವಿವಾರ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದ‌ರ್ ಪರಿಶೀಲಿಸಿ, ಮಾತನಾಡಿದ ಸ್ಪೀಕರ್ ಯು.ಟಿ. ಖಾದ‌ರ್ ಅವರು, ಮಂಗಳೂರಿನಲ್ಲಿ ಫುಟ್ಬಾಲ್ ಆಟಕ್ಕೆ ಸುಸಜ್ಜಿತ ಟರ್ಫ್ ಕ್ರೀಡಾಂಗಣ ಬಹುತೇಕ ಸಿದ್ದವಾಗಿದೆ. ಶೇ 90ರಷ್ಟು ಕಾಮಗಾರಿ ಮುಗಿದಿದೆ. ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಂಡು ಫುಟ್ಬಾಲ್ ಆಟಕ್ಕೆ ಕ್ರೀಡಾಂಗಣ ಲಭ್ಯವಾಗಲಿದೆ. ಡಿಸೆಂಬರ್ ಮೂರನೇ ವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ ಈ ಕ್ರೀಡಾಂಗಣವನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಫುಟ್ಬಾಲ್ ಕ್ರೀಡಾಂಗಣವು ಈಗಾಗಲೇ ಆಕ್ಟೋ ಟರ್ಫ್ ಅಳವಡಿಸಲಾಗಿದೆ. ಇಂಟರ್ಲಾಕ್, ತಡೆಬೇಲಿ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿದೆ.

Category
ಕರಾವಳಿ ತರಂಗಿಣಿ