image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಸರಾ ಹಿನ್ನೆಲೆಯಲ್ಲಿ ಈ ವರ್ಷವೂ ಕೂಡ ಮಂಗಳೂರು ಕೆಎಸ್‍ಆರ್​ಟಿಸಿಯ ವಿಶೇಷ ಪ್ಯಾಕೇಜ್

ದಸರಾ ಹಿನ್ನೆಲೆಯಲ್ಲಿ ಈ ವರ್ಷವೂ ಕೂಡ ಮಂಗಳೂರು ಕೆಎಸ್‍ಆರ್​ಟಿಸಿಯ ವಿಶೇಷ ಪ್ಯಾಕೇಜ್

ಮಂಗಳೂರು: ಕೆಎಸ್‍ಆರ್​ಟಿಸಿ ಮಂಗಳೂರು ವಿಭಾಗದ ವತಿಯಿಂದ ಕಳೆದ ಎರಡು ವರ್ಷಗಳಿಂದ ಯಶಸ್ವಿಯಾಗಿ ನಡೆದಿದ್ದ 'ನವರಾತ್ರಿ ನವದುರ್ಗೆಯರ ದರ್ಶನ' ಸೇರಿದಂತೆ ಟೂರ್ ಪ್ಯಾಕೇಜ್​ಗಳು ಮತ್ತೆ ಬಂದಿವೆ. ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕಾಗಿ ಅಕ್ಟೋಬರ್ 3ರಿಂದ 12ರ ವರೆಗೆ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರುಡೇಶ್ವರ ನಡುವೆ ವಿಶೇಷ ಪ್ಯಾಕೇಜ್ ಕಲ್ಪಿಸಲಾಗುತ್ತಿದೆ.

ಮಂಗಳೂರು ಬಸ್​​ ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಟು ಮಂಗಳಾದೇವಿ ದೇವಸ್ಥಾನ-ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ-ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ-ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ-ಸಸಿಹಿತ್ಲು ಭಗವತಿ ದೇವಸ್ಥಾನ ಹಾಗೂ ಬೀಚ್-ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನ-ಉರ್ವ ಮಾರಿಯಮ್ಮ ದೇವಸ್ಥಾನ -ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮೂಲಕ ನವದುರ್ಗಾ ದರ್ಶನದ ಬಸ್​ ರಾತ್ರಿ 8ಗಂಟೆಗೆ ಮಂಗಳೂರು ನಿಲ್ದಾಣಕ್ಕೆ ಹಿಂದಿರುಗಲಿದೆ. ಪ್ರಯಾಣ ದರವು ವಯಸ್ಕರಿಗೆ 400 ರೂ. ಹಾಗೂ ಮಕ್ಕಳಿಗೆ 300 ರೂ. ಇರಲಿದೆ.

ಈ ಬಸ್​ ಮಂಗಳೂರಿನಿಂದ ಬೆಳಗ್ಗೆ 7 ಗಂಟೆಗೆ ಹೊರಟು ಮಡಿಕೇರಿ-ರಾಜಾಸೀಟ್ -ಅಬ್ಬಿಫಾಲ್ಸ್-ನಿಸರ್ಗಧಾಮ ಹಾಗೂ ಗೋಲ್ಡನ್ ಟೆಂಪಲ್ ಪ್ರವಾಸ ಕೈಗೊಂಡು ರಾತ್ರಿ 9 ಗಂಟೆಗೆ ಮಂಗಳೂರು ನಿಲ್ದಾಣಕ್ಕೆ ಮರಳಲಿದೆ. ಪ್ರಯಾಣದ ದರವನ್ನು ವಯಸ್ಕರಿಗೆ 500 ರೂ. ಹಾಗೂ ಮಕ್ಕಳಿಗೆ 400 ರೂ. ನಿಗದಿಪಡಿಸಲಾಗಿದೆ.

ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಟು ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ-ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ)-ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹಾಗೂ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನಗಳ ಪ್ರವಾಸ ಕೈಗೊಂಡು ರಾತ್ರಿ 7 ಗಂಟೆಗೆ ಮಂಗಳೂರು ನಿಲ್ದಾಣಕ್ಕೆ ಹಿಂದಿರುಗಲಿದೆ. ಪ್ರಯಾಣದ ದರವು ವಯಸ್ಕರಿಗೆ 500 ರೂ. ಹಾಗೂ ಮಕ್ಕಳಿಗೆ 400 ರೂ. ನಿಗದಿಯಾಗಿದೆ.

Category
ಕರಾವಳಿ ತರಂಗಿಣಿ