ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ನೆರವೇರಿತು. ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ರಥೋತ್ಸವ ವೇಳೆ ಸಹಸ್ರಾರು ಭಕ್ತರು ಜಯಘೋಷ ಕೂಗಿದರು. ರಥೋತ್ಸವ ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣ ಕಟ್ಟೆಯಲ್ಲಿ ಅವಳಿ ಕಟ್ಟೆಯಲ್ಲಿ ಪೂಜೆ ನಡೆಯಿತು.