image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಡಿ.25: ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರಿಗೆ ಶೇಣಿ ಪ್ರಶಸ್ತಿ

ಡಿ.25: ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರಿಗೆ ಶೇಣಿ ಪ್ರಶಸ್ತಿ

ಮಂಗಳೂರು: ಯಕ್ಷಗಾನದ ಭೀಷ್ಮ, ಹರಿದಾಸ ಡಾ. ಶೇಣಿ ಗೋಪಾಲಕೃಷ್ಣ ಭಟ್ ಅವರ ಹೆಸರಿನಲ್ಲಿ ಎರಡು ದಶಕಗಳಿಂದ ಕಾರ್ಯ ನಿರ್ವಹಿಸುತ್ತಿರುವ ಟ್ರಸ್ಟ್ 2025ನೇ ಸಾಲಿನ ಶೇಣಿ ಪ್ರಶಸ್ತಿಗೆ ಹಿರಿಯ ತಾಳಮದ್ದಳೆ ಅರ್ಥದಾರಿ, ಪ್ರವಚನಕಾರ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರು ಆಯ್ಕೆಯಾಗಿದ್ದಾರೆ ಎಂದು ಟ್ರಸ್ಟ್ ನ ಅಧ್ಯಕ್ಷ ಕೆ. ಮಹಬಲ ಶೆಟ್ಟಿ ತಿಳಿಸಿದರು.

ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಡಿ.25 ರಂದು ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಗರದ ಉರ್ವಸ್ಟೋರ್ ನ ಶ್ರೀ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ನಡೆಯಲಿದ್ದು, ಪ್ರಶಸ್ತಿಯು 30 ಸಾವಿರ ತಲರೂ. ನಗದು ಹಾಗೂ ಪ್ರಶಸ್ತಿಪತ್ರವನ್ನು ಒಳಗೊಂಡಿರುತ್ತದೆ ಎಂದರು.

ಕಾರ್ಯಕ್ರಮವನ್ನು ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸುರೇಂದ್ರ ರಾವ್ ಉದ್ಘಾಟಿಸಲಿದ್ದು, ಕರ್ನಾಟಕ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೆಬಲ್ ಟ್ರಸ್ಟ್ ನ ಗೌರವಾಧ್ಯಕ್ಷ ಡಾ. ಹರಿಕೃಷ್ಣ ಬಂಟ್ವಾಳ ಶುಭಾಶಂಸನೆ ಮಾಡಲಿದ್ದಾರೆ. ಹಿರಿಯ ಲೆಕ್ಕಪರಿಶೋಧಕ ಸಿ.ಎ. ಶ್ಯಾಮ ಭಟ್, ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಕಾರ್ಯದರ್ಶಿ ಶ್ರೀಧರ ಮಣಿಯಾಣಿ, ಮಂಗಳೂರಿನ ಉದ್ಯಮಿ ಶಿವಪ್ರಸಾದ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹರಿಕೃಷ್ಣ ಪುನರೂರು, ಶ್ರೀಪತಿ ಭಟ್ ಬೆಳ್ಳಾರೆ, ಶ್ರೀಣಿ ಮುರುಳಿ, ಸುಂದರ ಶೆಟ್ಟಿ, ರಾಮ ಭಟ್ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ