image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿ ಸಮಾರೋಪ ಸಮಾರಂಭ

ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿ ಸಮಾರೋಪ ಸಮಾರಂಭ

ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ 45 ದಿನಗಳ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್‌ವರ್ಕಿಂಗ್ ತರಬೇತಿ ಹಾಗೂ 08 ದಿನಗಳ ಬ್ಯಾಂಕ್ ಮಿತ್ರ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ನಡೆಯಿತು.

ಸಮಾರಂಭದ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಪ್ರಕಾಶ ಕಾಮತ್  ಭಾಗವಹಿಸಿ ಮಾತನಾಡಿ, ಆದಾಯ ಗಳಿಸಬೇಕಾದರೆ ಕೌಶಲ್ಯವನ್ನು ಕಲಿಯುವುದು ಅಗತ್ಯವೆಂದು ತಿಳಿಸಿದರು. ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ನಡೆಯುವ ಸಂಸ್ಥೆಗಳು ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಕಲಿಸುತ್ತವೆ. ಅಂತಹ ಸಂಸ್ಥೆಯಲ್ಲಿ ತರಬೇತಿ ಪಡೆದವರ ಭವಿಷ್ಯ ಉಜ್ವಲವಾಗಲಿದೆ ಎಂದು ಅವರು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಬಿ.ಪಿ. ವಿಜಯ ಕುಮಾರ್ ಅವರು ವಹಿಸಿ ಮಾತನಾಡಿ, ಕೌಶಲ್ಯಾಭಿವೃದ್ಧಿಗೆ ಅಗತ್ಯವಿರುವ ಹಣಕಾಸಿನ ನೆರವನ್ನು ಪಡೆದುಕೊಂಡು ಸ್ವ ಉದ್ಯೋಗ ಹಾಗೂ ಉದ್ಯೋಗದ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸುವಂತೆ ತರಬೇತಿಗಾರರಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್‌ವರ್ಕಿಂಗ್ ತರಬೇತಿಯ ಅತಿಥಿ ಉಪನ್ಯಾಸಕರಾದ ಶ್ರೀ ಗೌತಮ್ ಕುಕ್ಯಾನ್ ಹಾಗೂ ಬ್ಯಾಂಕ್ ಮಿತ್ರ ತರಬೇತಿಯ ಅತಿಥಿ ಉಪನ್ಯಾಸಕರಾದ ಶ್ರೀ ಬಿ.ವಿ. ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಅತಿಥಿಗಳನ್ನು ಸಂಸ್ಥೆಯ ನಿರ್ದೇಶಕರಾದ ಶ್ರೀ ಅಜೇಯ್  ಸ್ವಾಗತಿಸಿದರು ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ವಂದಿಸಿದರು. ಕಾರ್ಯಕ್ರಮವನ್ನು ಹಿರಿಯ ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ನಿರೂಪಿಸಿದರು. ತರಬೇತಿಗಾರರಾದ ಶಿವಾನಂದ, ಮಂಜುನಾಥ, ಮಂಜುಳಾ ಹಾಗೂ ರಿಜ್ವಾನ್  ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡರು.

Category
ಕರಾವಳಿ ತರಂಗಿಣಿ