ಬೆಂಗಳೂರು: ರಾಜ್ಯದಲ್ಲಿ ಸುಮಾರು ಮೂರು ಕೋಟಿಯಷ್ಟು ವಿವಿಧ ರೀತಿಯ ಕಾರ್ಮಿಕರಿರುವ "ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ" ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ ಸರಕಾರ ಆದೇಶಿಸಿದೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗು ಕಾರ್ಮಿಕ ಸಚಿವ ಸಂತೋಷ್ ಲಾಡ್ ಗೆ ಕಾರ್ಮಿಕರ ಬಗ್ಗೆ ಇರುವ ವಿಶೇಷ ಕಾಳಜಿ ಮತ್ತು ಕಾರ್ಮಿಕರ ಕನಿಷ್ಠ ವೇತನದ ಸಮಸ್ಯೆ ಬಗ್ಗೆ ಚರ್ಚಿಸಲು, ಬಗೆಹರಿಸಲು ಇತರ ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಕಾರ್ಮಿಕ ಕನಿಷ್ಠ ವೇತನದ ಬಗ್ಗೆ ಅಧ್ಯಯನ ಮಾಡಲು ಹಾಗೂ ಕೇಂದ್ರ ಸರಕಾರದ ಜಾರಿಗೆ ತಂಡ ನೂತನ ಕಾರ್ಮಿಕ ಸಂಹಿತೆ ಮೊದಲಾದ ಅಂಶಗಳನ್ನು ಪರಿಗಣಿಸಿ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿರುವುದು ಗಮನಾರ್ಹ. ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ಸರಕಾರದ ನಾರು ಮಂಡಳಿ ಸದಸ್ಯರಾಗಿ, ರಾಜ್ಯದ ರಾಜೀವ್ ಯೂತ್ ಪೌಂಡೇಶನ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ