image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಾಖಲೀಕರಣದಿಂದ ಸಾಧನೆಯ ನೆನಪು ಶಾಶ್ವತ-ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾೃನಿ ಆಲ್ವಾರಿಸ್

ದಾಖಲೀಕರಣದಿಂದ ಸಾಧನೆಯ ನೆನಪು ಶಾಶ್ವತ-ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾೃನಿ ಆಲ್ವಾರಿಸ್

ಮಂಗಳೂರು : ಸಂಘ, ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯ ಚಟುವಟಿಕೆಗಳು ಕಾಲ ಕ್ರಮೇಣ  ಮರೆತು ಹೋಗಬಹುದು. ಅವುಗಳನ್ನು ಕ್ರೋಢಿಕರಿಸಿ ಒಂದೆಡೆ ದಾಖಲೀಕರಣ ಮಾಡಿದಾಗ ಸಂಘದ ಸಾಧನೆ ಶಾಶ್ವತವಾಗಿ ಉಳಿಯುತ್ತದೆ ಎಂದು ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾೃನಿ ಆಲ್ವಾರಿಸ್ ಹೇಳಿದರು.

ಮಂಗಳೂರು ಪ್ರೆಸ್ ಕ್ಲಬ್ ಮತ್ತು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗೃಹ ಪತ್ರಿಕೆ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ’ ಇದರ 7ನೇ ಸಂಚಿಕೆಯನ್ನು ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ ಮಾತನಾಡಿ ಪತ್ರಕರ್ತರು ಸಮಾಜದ ಕನ್ನಡಿಯಾಗಿದ್ದು ಅವರ ಸಂಘಟನೆಯ ಸಾಧನೆಯನ್ನು ದಾಖಲೆ ಮಾಡುವುದು ಉತ್ತಮಕಾರ್ಯ ಎಂದರು.

ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.  ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್, ಪ್ರಧಾನ ಕಾರ್ಯದರ್ಶಿ ರಾಜೇಶ್.ಕೆ. ಪೂಜಾರಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಹಿರಿಯ ಪತ್ರಕರ್ತ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು. ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.

Category
ಕರಾವಳಿ ತರಂಗಿಣಿ