image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಿವೃತ್ತ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ನಿವೃತ್ತ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ದಿನಾಂಕ 01-07-2022 ರಿಂದ 31-7-2024 ರ ಅವಧಿಯಲ್ಲಿ ನಿವೃತ್ತ ಸರಕಾರಿ ನೌಕರರಾದ ನಮಗೆ 6 ನೇ ವೇತನ ಆಯೋಗದ ಲೆಕ್ಕಾಚಾರದ ಅನುಸಾರ ಡಿ.ಸಿ.ಆರ್.ಜಿ. ಕಮ್ಯುಟೇಶನ್, ಗಳಿಕೆ ರಜೆ ನಗದೀಕರಣಗಳ ನಿವೃತ್ತಿ ಆರ್ಥಿಕ ಸೌಲಭ್ಯವನ್ನು ನೀಡಿದ್ದಾರೆ. ಈ ನಿಟ್ಟಿನಲ್ಲಿ ನಮಗೆ ಆರ್ಥಿಕ ನಷ್ಟವುಂಟಾಗಿ ಅನ್ಯಾಯವಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಶ್ರೀ ಷಣ್ಮುಖಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

ಈ ದಿಸೆಯಲ್ಲಿ ನಾವುಗಳು ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಿಗೆ ಮೇಲಿನ ಅವಧಿಯಲ್ಲಿ ನಿವೃತ್ತರಾದವರಿಗೆ 7 ನೇ ವೇತನ ಆಯೋಗದ ಲೆಕ್ಕಾಚಾರದ ಅನುಸಾರ ಡಿ.ಸಿ.ಆರ್.ಜಿ. ಕಮ್ಯುಟೇಶನ್, ಗಳಿಕೆ ರಜೆ ನಗದೀಕರಣಗಳ ನಿವೃತ್ತಿ ಆರ್ಥಿಕ ಸೌಲಭ್ಯವನ್ನು ನೀಡಬೇಕೆಂದು ಆಗ್ರಹಿಸಿ ಈಗಾಗಲೇ ರಾಜ್ಯದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರುಗಳ, ಎಲ್ಲ ಕ್ಷೇತ್ರಗಳ ಶಾಸಕರ, ಎಲ್ಲಾ ಜಿಲ್ಲಾಧಿಕಾರಿಗಳ ಹಾಗೂ ಎಲ್ಲ ತಹಶೀಲ್ದಾರುಗಳ ಮುಖಾಂತರ ನೂರಾರು ನಿವೃತ್ತ ನೌಕರರು ಮನವಿಯನ್ನು ಅರ್ಪಿಸಿದ್ದೇವೆ. ಅಲ್ಲದೇ ದಿನಾಂಕ 18-9-2024 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸರಿ ಸುಮಾರು 12 ಸಾವಿರ ನಿವೃತ್ತ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶವನ್ನು ವಿಶ್ರಾಂತ ನ್ಯಾಯಮೂರ್ತಿಗಳಾದ ಸಂತೋಷ ಹೆಗಡೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯಾಧ್ಯಕ್ಷ ಸಿ. ಎಸ್. ಷಡಕ್ಷರಿ, ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷ ಡಾ|| ಎಲ್. ಭೈರಪ್ಪ ಇವರುಗಳ ಸಮ್ಮುಖದಲ್ಲಿ ನಮಗೆ ಆಗಿರುವ ಅನ್ಯಾಯದ ಕುರಿತು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ, ಉಪಮುಖ್ಯಮಂತ್ರಿಗಳಿಗೆ, ಉಭಯ ಸಂಘಟನೆಗಳ ರಾಜ್ಯಾಧ್ಯಕ್ಷರುಗಳಿಗೆ, ಒಕ್ಕೊರಲಿನ ಹಕ್ಕೊತ್ತಾಯದ ಪ್ರತಿ ಸಮರ್ಪಿಸಿದ್ದೇವೆ.

ಈ ನಿಟ್ಟಿನಲ್ಲಿ ನಮಗೆ 7 ನೇ ವೇತನ ಆಯೋಗದಲ್ಲಿ ಆಗಿರುವ ಸುಮಾರು 12 ರಿಂದ 22 ಲಕ್ಷ ಆರ್ಥಿಕ ನಷ್ಟ ಉಂಟಾಗಿ ಅನ್ಯಾಯಕ್ಕೆ ಒಳಗಾಗಿರುವ ನಾವುಗಳು ಸಹ ರಾಜ್ಯದ ಕಾರ್ಯಾಂಗದಲ್ಲಿ 7.50,000 ನೌಕರರಲ್ಲಿ 1,50.000 ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ 30 ರಿಂದ 40 ವರ್ಷ ಸುದೀರ್ಘ ಸೇವೆಸಲ್ಲಿಸಿದ ನಮ್ಮನ್ನು ಕಡೆಗಣಿಸದಂತಾಗಿದೆ. ಈ ದಿಸೆಯಲ್ಲಿ ಘನ ಸರಕಾರವಾಗಲಿ, ಮುಖ್ಯಮಂತ್ರಿಗಳಾಗಲಿ ನಮ್ಮ ಬೇಡಿಕೆ ಪರಿಗಣಿಸಿ ಈಡೇರಿಸುವತ್ತ ಗಮನ ಹರಿಸದೇ ನಿರ್ಲಕ್ಷಿಸಿದ್ದಾರೆ.

ಆದ್ದರಿಂದ ರಾಜ್ಯದಾದ್ಯಂತ ಏಕಕಾಲಕ್ಕೆ ಸರ್ವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ  01-10-2024 ವಿಶ್ವ ನಾಗರಿಕರ ದಿನಾಚರಣೆಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಇವರ ಕಚೇರಿ ಮುಂದೆ ಒಂದು ದಿನದ ಧರಣಿ - ಸತ್ಯಾಗ್ರಹವನ್ನು ಕಪ್ಪು ಪಟ್ಟಿ ಧರಿಸಿ ಧರಣಿ ನಡೆಸುವುದರೊಂದಿಗೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಅರ್ಪಿಸಲಿದ್ದೇವೆ. ಈ ನಮ್ಮ ಸತ್ಯಾಗ್ರಹಕ್ಕೆ ವಿವಿಧ ಸಂಘ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದೇವೆ. ಮುಂದೆ ನೌಕರರ ಕುಟುಂಬದ ಸದಸ್ಯರನ್ನೂ ಲಕ್ಷಕ್ಕೂ ಹೆಚ್ಚು ಜನರು ವಿಧಾನ ಸೌದಕ್ಕೆ ಮುತ್ತಿಗೆ ಹಾಕುವ ಯೋಜನೆಯೂ ಇದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸೀರಿಲ್ ರಾಬರ್ಟ್ ಡಿಸೋಜಾ, ಶ್ರೀಮತಿ ಮಂಜುಳಾ, ಗಣೇಶ್ ಸುವರ್ಣ, , ಮೋಹನ ಬಂಗೇರ, ನಾರಾಯಣ ಮೊದಲಾದವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ