ಮಂಗಳೂರು : ದ.ಕ. ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಪೊಲೀಸ್ ನಿರ್ಬಂಧ ವಿಚಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್, ಈ ಬಗ್ಗೆ ಸರಕಾರ ಚರ್ಚೆ ಮಾಡಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದರು. ಸ್ಪೀಕರ್ ಆಗಿ ನಾನು ಮಾತನಾಡಲು ಆಗುವುದಿಲ್ಲ. ನಮ್ಮ ವೈಯಕ್ತಿಕ ಅಭಿಪ್ರಾಯ ಯಾವುದೇ ಇದ್ದರೂ ಸಂವಿಧಾನ ಬದ್ದ ಸ್ಥಾನದಲ್ಲಿರುವಾಗ ಹೆಚ್ಚು ಮಾತನಾಡಲು ಆಗುವುದಿಲ್ಲ. ಸಮಾಜದಲ್ಲಿ ಜನರು ಸಂತೋಷದಿಂದ ಇರುವ ವಾತಾವರಣ ನಿರ್ಮಾಣ ಮಾಡುವುದು ಸರಕಾರ ಹಾಗೂ ಅಧಿಕಾರಿಗಳ ಜವಾಬ್ದಾರಿ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ.