image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಂಸದ ಕ್ಯಾ. ಚೌಟ ನೇತೃತ್ವದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ನವ ವರ್ಷದ ಕಂಬಳ...

ಸಂಸದ ಕ್ಯಾ. ಚೌಟ ನೇತೃತ್ವದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ನವ ವರ್ಷದ ಕಂಬಳ...

ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ಕಂಬಳ ಸಮಿತಿ ವತಿಯಿಂದ ಬಂಗ್ರಕೂಳೂರಿನ ಗೋಲ್ಡ್‌ಪಿಂಚ್‌ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ನಡೆದ ನವ ವರ್ಷದ-ನವ ವಿಧದ ಮಂಗಳೂರು ಕಂಬಳವು ನವರೂಪದಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳೊಂದಿಗೆ ಬಹಳ ಯಶಸ್ವಿಯಾಗಿ ಸಂಪನ್ನಗೊಂಡಿದೆ.

ಈ ಬಾರಿಯ ಮಂಗಳೂರು ಕಂಬಳದಲ್ಲಿ ಸಂಸದ ಕ್ಯಾ. ಚೌಟ ಅವರ ಆಶಯದಂತೆ ನಮ್ಮ ತುಳುನಾಡಿನ ಜನರಲ್ಲಿ ದೇಶ ಭಕ್ತಿಯ ಚೈತನ್ಯವನ್ನು ಉದ್ದೀಪನಗೊಳಿಸಲು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಕರೆಯಂತೆ ವಂದೇ ಮಾತರಂ' ಗೀತೆಯನ್ನು ಕೆರೋಕೆಯೊಂದಿಗೆ ಹಾಡಿ, ಅದರ ವಿಡಿಯೋವನ್ನು ವಂದೇ ಮಾತರಂ ವೆಬ್ ಸೈಟ್ ನಲ್ಲಿ ಅಪ್‌ಲೋಡ್  ಮಾಡಲು ವಿಶೇಷ ಬೂತ್ ವ್ಯವಸ್ಥೆ ಕಲ್ಪಿಸಲಾಗಿತ್ತು. 

ಅದರಂತೆ, ಒಂದೆಡೆ ಕಂಬಳದ ಕೋಣಗಳ ಓಟ ಸ್ಪರ್ಧೆ ನಡೆಯುತ್ತಿದ್ದರೆ, ಮತ್ತೊಂದಡೆ ಮಕ್ಕಳು, ಯುವಕರು, ಮಹಿಳೆಯರು, ಹಿರಿಯರು,ಕಂಬಳ ಓಟಗಾರರು ಹೀಗೆ ಕಂಬಳಕ್ಕೆ ಬಂದಿದ್ದವರ ಪೈಕಿ ಸುಮಾರು 1000ಕ್ಕೂ ಹೆಚ್ಚು ಮಂದಿ ಬಂದು ವಂದೇ ಮಾತರಂ ಗೀತೆ ಹಾಡಿ ಹಾಡಿ ಡಿಜಿಟಲ್ ಸರ್ಟಿಫಿಕೇಟ್ ಪಡೆದುಕೊಂಡರು.

ಈ ಮೂಲಕ ಇಡೀ ಮಂಗಳೂರು ಕಂಬಳದಲ್ಲಿ ದೇಶಪ್ರೇಮದ ಕಿಡಿ ಪಸರಿಸುವ ಬಹಳ ವಿನೂತನ ಪ್ರಯತ್ನವನ್ನು ಕ್ಯಾ. ಚೌಟ ಅವರು ಮಾಡಿದ್ದಾರೆ.  ಮಂಗಳೂರು ಕಂಬಳದಲ್ಲಿಯೂ ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆಗೆ ತುಳುನಾಡಿನ ಜನತೆಯು ವಿಭಿನ್ನ ರೀತಿ ಸಾಕ್ಷಿಯಾಗುವಂತೆ ಮಾಡಿದ ಕ್ಯಾ. ಬ್ರಿಜೇಶ್‌ ಚೌಟ ಅವರ ಪ್ರಯತ್ನ ನಿಜಕ್ಕೂ ಮಾದರಿ ಹಾಗೂ ಶ್ಲಾಘನೀಯ.

ನವ ವಿಧದ-ನವ ವರ್ಷದ ಮಂಗಳೂರು ಕಂಬಳದ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ ಅವರು, “ಮಂಗಳೂರು ಕಂಬಳ ಸಮಿತಿಯ ಅವಿರತ ಪರಿಶ್ರಮ ಹಾಗೂ ಉತ್ಸಾಹದ ಫಲವಾಗಿ 9ನೇ ವರ್ಷದ ಮಂಗಳೂರು ಕಂಬಳವು ತುಳುನಾಡಿನ ಅಸ್ಮಿತೆಯನ್ನು ಮತ್ತಷ್ಟು ಗಟ್ಟಿಗೊಳಿಸಿ ಕಂಬಳದ ಸೊಬಗು ನೋಡಲು ಬಂದ ಜನರಲ್ಲಿ ದೇಶಭಕ್ತಿಯ ಭಾವ ಉದ್ದೀಪನಗೊಳಿಸುವುದಕ್ಕೆ ಸಾಕ್ಷಿಯಾಗಿದ್ದು ವೈಯಕ್ತಿಕವಾಗಿ ಬಹಳ ಖುಷಿ ಹಾಗೂ ಸಂತೃಪ್ತಿ ತಂದಿದೆ.

ಇಡೀ ಮಂಗಳೂರು ಕಂಬಳ  ಬಹಳ ಅಚ್ಚುಕಟ್ಟಾಗಿ ನಡೆಯುವ ಮೂಲಕ ಅದರ ಯಶಸ್ವಿಗೆ ನೇರ ಹಾಗೂ ಪರೋಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆಯನ್ನು ಸಲ್ಲಿಸಬಯಸುತ್ತೇವೆ. ಇದು ಮುಂದಿನ 10ನೇ ವರ್ಷದ ಮಂಗಳೂರು ಕಂಬಳವನ್ನು ಮತ್ತಷ್ಟು ವೈಭವೋಪೇತವಾಗಿ ಆಯೋಜಿಸುವುದಕ್ಕೆ ಉತ್ತೇಜನವನ್ನು ನೀಡಿದೆ ಎಂದು ಕ್ಯಾ.ಚೌಟ ಅವರು ಅಭಿಪ್ರಾಯಪಟ್ಟಿದ್ದಾರೆ.

ಕಂಬಳ ಕೂಟದ ಫಲಿತಾoಶ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 09 ಜೊತೆ 

ಅಡ್ಡಹಲಗೆ: 10 ಜೊತೆ 

ಹಗ್ಗ ಹಿರಿಯ: 17 ಜೊತೆ 

ನೇಗಿಲು ಹಿರಿಯ: 26 ಜೊತೆ 

ಹಗ್ಗ ಕಿರಿಯ: 19 ಜೊತೆ 

ನೇಗಿಲು ಕಿರಿಯ: 60 ಜೊತೆ 

ಒಟ್ಟು ಕೋಣಗಳ ಸಂಖ್ಯೆ: 141 ಜೊತೆ

ಅಡ್ಡ ಹಲಗೆ:

ಪ್ರಥಮ: ಇರುವೈಲು ದೊಡ್ಡಗುತ್ತು ಜಗದೀಶ್  ಎಂ ಶೆಟ್ಟಿ "ಎ" (11.68)

ಹಲಗೆ ಮುಟ್ಟಿದವರು:ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ನಾರ್ಯ ಗುತ್ತು ಕುವೆತ್ತಬೈಲು ಸಂತೋಷ್ ರೈ ಬೊಳ್ಯಾರು (11.83)

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ಹಗ್ಗ ಹಿರಿಯ: 

ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.41)

ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ಪ್ರಾಣೇಶ್ ದಿನೇಶ್ ಭಂಡಾರಿ "ಎ" (11.50)

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ "ಬಿ" (11.41)

ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ

ದ್ವಿತೀಯ: ಎರ್ಮಾಳ್ ಡಾ.ಚಿಂತನ್ ರೋಹಿತ್ ಹೆಗ್ಡೆ (11.62)

ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡ

ನೇಗಿಲು ಹಿರಿಯ: 

ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (10.87)

ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್

ದ್ವಿತೀಯ: ಮಂಗಳೂರು ಮರಕಡ ಬಾಯಾಡಿ ಮನೆ ಶಾಂತ ಸಂಜಯ್ ಶೆಟ್ಟಿ "ಎ" (11.44)

ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ನೇಗಿಲು ಕಿರಿಯ:

ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ "ಬಿ" (11.56)

ಓಡಿಸಿದವರು: ಕಾವೂರುದೋಟ ಸುದರ್ಶನ್

ದ್ವಿತೀಯ: ಮುಲ್ಕಿ ಚಿತ್ರಾಪು ಸಾನದಮನೆ ಅಂಬಿಕಾ ರವೀಂದ್ರ ಪೂಜಾರಿ (11.74)

ಓಡಿಸಿದವರು: ಬಾರಾಡಿ ನತೀಶ್ ಸಫಲಿಗ

Category
ಕರಾವಳಿ ತರಂಗಿಣಿ