image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕೋಗಿಲು ಬಡಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಎಸ್ ಐಟಿ ರಚಿಸಬೇಕು- ಶಾಸಕ ಭರತ್ ಶೆಟ್ಟಿ

ಕೋಗಿಲು ಬಡಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಎಸ್ ಐಟಿ ರಚಿಸಬೇಕು- ಶಾಸಕ ಭರತ್ ಶೆಟ್ಟಿ

ಮಂಗಳೂರು : ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದವರ ಬಗ್ಗೆ ಸಮಗ್ರ ತನಿಖೆಗೆ ಎಸ್ ಐಟಿ ರಚಿಸಬೇಕೆಂದು ಶಾಸಕ ಭರತ್ ಶೆಟ್ಟಿ ಆಗ್ರಹಿಸಿದ್ದಾರೆ. ಅವರು‌ ತಮ್ಮ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರು ಯಾರು? ಅವರು ಅಲ್ಲಿಗೆ ಬಂದು ನೆಲೆಸಲು ಅವಕಾಶ ಕೊಟ್ಟಿದ್ದು ಯಾರು, ಅವರು ಬಂದಿದ್ದು ಏಕೆ? ಅವರು ಬಂದಿದ್ದು ಎಲ್ಲಿಂದ ಎಂಬ ಬಗ್ಗೆ ಸಮಗ್ರ ತನಿಖೆಯಾಗಬೇಕು. ಇದಕ್ಕಾಗಿ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದರು. 

ಅಲ್ಲಿ ಒಕ್ಕಲೆಬ್ಬಿಸಿದವರಿಂದ ಯಾವುದೇ ದಾಖಲೆ ಪತ್ರವನ್ನು ಕೇಳದೆಯೇ ಅವರಿಗೆ ನಾಲ್ಕೈದು ಕಿ.ಮೀ ದೂರದಲ್ಲಿ ಪುನರ್ವಸತಿ ಕಲ್ಪಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಈ ಬೆಳವಣಿಗೆಗಳ ಹಿಂದೆ ವಸತಿ ಸಚಿವ ಜಮೀರ್ ಅಹಮದ್ ಖಾನ್‌ ಕೈವಾಡ ಇದೆ ಎಂದು ಅವರು ಆರೋಪಿಸಿದ್ದಾರೆ.

ಅಕ್ರಮ ವಲಸಿಗರಿಗೆ ವಸತಿ ಕಲ್ಪಿಸುವುದರ ಹಿಂದೆ ಕೇರಳದ ರಾಜಕೀಯ ಒತ್ತಡ ಕೆಲಸ ಮಾಡಿದೆ. ಎರಡೂವರೆ ವರ್ಷದಲ್ಲಿ ರಾಜ್ಯದ ಬಡವರಿಗೆ ಸರ್ಕಾರ ಒಂದೇ ಒಂದು ಮನೆ ಕೊಟ್ಟಿಲ್ಲ. ನಗರದಲ್ಲಿ ವಸತಿ ಜಮೀನಿಗಾಗಿ ನಮೂನೆ 94 ಸಿ ಮತ್ತು 94ಸಿ.ಸಿ ಅಡಿ ಅರ್ಜಿ ಸಲ್ಲಿಸಲಿಕ್ಕೂ ಅವಕಾಶ ಕಲ್ಪಿಸಿಲ್ಲ. ನಮ್ಮ ರಾಜ್ಯದವರ ಪರಿಸ್ಥಿತಿ ಹೀಗಿರುವಾಗ ಹೊರರಾಜ್ಯದ ಅಕ್ರಮ ವಲಸಿಗರಿಗೆ ಮನೆ ಕಟ್ಟಿಕೊಡುವ ಔಚಿತ್ಯವಾದರೂ ಏನು ಎಂದು ಅವರು ಪ್ರಶ್ನಿಸಿದರು.  ಮುಸಲ್ಮಾನರ ಮತಕ್ಕಾಗಿ ಈ ರೀತಿ ಮಾಡುವುದು ಸರಿಯಲ್ಲ. ಎಲ್ಲೆಲ್ಲಿಂದ ಬಂದು ಅಕ್ರಮವಾಗಿ ನೆಲೆಸಿದವರಿಗೆ ಮನೆ ಕಟ್ಟಿಕೊಡುವ ಸರ್ಕಾರ ರಾಜ್ಯದಲ್ಲೇ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿ ಕೊಟ್ಟಿಲ್ಲ ಎಂದರು.

Category
ಕರಾವಳಿ ತರಂಗಿಣಿ