image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ

ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಹಭಾಗಿತ್ವ ದಲ್ಲಿ  ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ  ಅಭಿಯಾನ ಅಕ್ಟೋಬರ್ ಒಂದರಂದು  ಬೆಳಿಗ್ಗೆ 10 ಗಂಟೆಗೆ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುನಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ಆನಂದ್ ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಅದಾನಿ  ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ವಿದ್ಯಾರ್ಥಿಗಳಿಗೆ ಬಟ್ಟೆ ಬ್ಯಾಗ್ ವಿತರಣೆ ಮಾಡಲಿದ್ದಾರೆ. ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಬ್ರಾಯನ್ ಪಿಂಟೋ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ ಜಗದೀಶ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ