image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ನಡೆದ ಕ್ರೀಡಾಕೂಟದಲ್ಲಿ ಐದು ನೂತನ ಕೂಟ ದಾಖಲೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ನಡೆದ ಕ್ರೀಡಾಕೂಟದಲ್ಲಿ ಐದು ನೂತನ ಕೂಟ ದಾಖಲೆ

ಮುಡಬಿದರೆ : ಕ್ರೀಡಾಕೂಟದಲ್ಲಿ ಮದ್ರಾಸ್ ವಿಶ್ವವಿದ್ಯಾಲಯವು ಸಮಗ್ರ ಪ್ರಶಸ್ತಿ ಪಡೆದರೆ, ತಮಿಳುನಾಡಿನ ಇತರರ ವಿ.ವಿ.ಗಳೂ ಉತ್ತಮ ಸಾಧನೆ ಮಾಡಿದವು. ಈ ಕುರಿತು ತಮಿಳುನಾಡು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ (ಎಸ್‌ಡಿಎಟಿ)ದ ತರಬೇತುದಾರ ವಿನೋದ್ ಕುಮಾರ್ ಪ್ರತಿಕ್ರಿಯಿಸಿ, ‘ತಮಿಳುನಾಡು ಸರ್ಕಾರವು ಎಸ್‌ಡಿಎಟಿ ಮೂಲಕ ಹಿರಿಯ ಪ್ರಾಥಮಿಕ ಶಾಲೆಯಲ್ಲೇ ಕ್ರೀಡಾಪಟುಗಳನ್ನು ಗುರುತಿಸಿ ಚೆನ್ನೆöÊಯ ನೆಹರೂ ಕ್ರೀಡಾಂಗಣದಲ್ಲಿ ಅತ್ಯುತ್ತಮ ತರಬೇತಿ ಹಾಗೂ ಆಹಾರ ಮತ್ತು ಹಾಸ್ಟೆಲ್ ನೀಡುತ್ತಿದೆ. ಅಧಿಕೃತ ರಾಷ್ಟಿçÃಯ ಮಟ್ಟದ ಕ್ರೀಡೆಯಲ್ಲಿ ಗೆದ್ದವರಿಗೆ ಪ್ರಥಮ-5 ಲಕ್ಷ, ದ್ವಿತೀಯ- 3ಲಕ್ಷ ಹಾಗೂ ತೃತೀಯ 2ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ. ವಿ.ವಿ. ಸೇರಿದಂತೆ ಪ್ರಮುಖ ಕ್ರೀಡಾಕೂಟಗಳಲ್ಲಿ ಗೆದ್ದವರಿಗೆ ಹಲವಾರು ನಗದು ಬಹುಮಾನಗಳಿವೆ’ ಎಂದು ವಿವರಿಸಿದರು.  

ಮಂಗಳೂರು ವಿಶ್ವವಿದ್ಯಾಲಯಕ್ಕೆ 16 ಪದಕ

ಕ್ರೀಡಾಕೂಟದ ಅಂತಿಮ ದಿನ ಮಂಗಳೂರು ವಿಶ್ವವಿದ್ಯಾಲಯವು ಎರಡು ಚಿನ್ನ ಹಾಗೂ ಒಂದು ಕಂಚು ಗೆದ್ದಿತು. ಒಟ್ಟು ಪದಕ ಪಟ್ಟಿಯಲ್ಲಿ ಆರು ಚಿನ್ನ, ಐದು ಬೆಳ್ಳಿ ಹಾಗೂ ಐದು ಕಂಚು ಸೇರಿದಂತೆ 16 ಪದಕ ಪಡೆಯಿತು. 4* 400 ಮೀಟರ್ಸ್ ಮಿಕ್ಸೆಡ್ ರಿಲೇ: (ಚಿನ್ನ) ಮತ್ತು ಮಹಿಳಾ ವಿಭಾಗದಲ್ಲಿ 10,000 ಮೀಟರ್ಸ್ ಓಟ: ನಿರ್ಮಲಾ(ಚಿನ್ನ), ಹಾಫ್ ಮ್ಯಾರಥಾನ್: ಭಾಗೀರಥಿ (ಚಿನ್ನ), 400 ಮೀ. ಹರ್ಡಲ್ಸ್: ದೀಕ್ಷಿತಾ ರಾಮ ಗೌಡ (ಬೆಳ್ಳಿ), ಲಾಂಗ್ ಜಂಪ್: ಶ್ರೀದೇವಿಕಾ ವಿ.ಎಸ್. (ಬೆಳ್ಳಿ), 4*400 ಮೀ.ರಿಲೇ: ಮಂಗಳೂರು ವಿ.ವಿ. (ಕಂಚು) ಹಾಗೂ ಪುರುಷರ ವಿಭಾಗದಲ್ಲಿ ಹ್ಯಾಮರ್ ಥ್ರೋ: ಮಹಮ್ಮದ್ ನದೀಂ (ಚಿನ್ನ), 4*400 ಮೀ. ರಿಲೇ: ಸಾಕೇತ್, ಕೇಶವನ್, ಪ್ರಥಮೇಶ್ ಹಾಗೂ ಆಕಾಶ್ ರಾಜ್-ತಂಡ (ಚಿನ್ನ), ಡಿಸ್ಕಸ್ ಥ್ರೋ: ಉಜ್ವಲ್ ಚೌಧರಿ(ಚಿನ್ನ), ನಾಗೇಂದ್ರ ಅಣ್ಣಪ್ಪ ನಾಯ್ಕ(ಕಂಚು), 100 ಮೀ. ಓಟ: ವಿಭಾಸ್ಕರ್ ಕುಮಾರ್ (ಬೆಳ್ಳಿ), 400 ಮೀ. ಹರ್ಡಲ್ಸ್: ಆರ್ಯನ್ ಪ್ರಜ್ವಲ್ ಕಶ್ಯಪ್ (ಬೆಳ್ಳಿ), 800 ಮೀ. ಓಟ: ಪ್ರಥಮೇಶ್ ಅಮರಿಸ್ಲಾ ದಿಯೋರಾ (ಬೆಳ್ಳಿ), ಶಾಟ್‌ಪುಟ್: ಅನಿಕೇತ್ (ಕಂಚು), ಡೆಕಥ್ಲಾನ್: ಚಮನ್‌ಜ್ಯೋತ್ ಸಿಂಗ್ (ಕಂಚು), 400 ಮೀಟರ್ಸ್ ಓಟ: ಆಕಾಶ್ ರಾಜ್ ಎಸ್.ಎಂ. (ಕಂಚು) ಸ್ಥಾನ ಪಡೆದಿದ್ದಾರೆ.

ಮದ್ರಾಸ್ ಮುಕುಟಕ್ಕೆ ಸಮಗ್ರ: ಮಂಗಳೂರು ರನ್ನರ್

ಸತತ ಐದು ದಿನವೂ ಟ್ರಾö್ಯಕ್ ಓಟದಲ್ಲಿ ಪಾರಮ್ಯ ಮೆರೆದ ಮದ್ರಾಸ್ ವಿಶ್ವವಿದ್ಯಾಲಯವು 134 ಅಂಕಗಳೊAದಿಗೆ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26’ರ ಟ್ರೋಫಿಯನ್ನು ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಶುಕ್ರವಾರ ಎತ್ತಿ ಹಿಡಿಯಿತು. ಸ್ಥಳೀಯ ಮಂಗಳೂರು ವಿಶ್ವವಿದ್ಯಾಲಯವು ಎರಡು ವಿಭಾಗದಲ್ಲಿ 109 ಅಂಕಗಳೊAದಿಗೆ ರನ್ನರ್ ಅಪ್ ಪ್ರಶಸ್ತಿ ಪಡೆಯಿತು. ಪುರುಷರ ವಿಭಾಗದಲ್ಲಿ ಮದ್ರಾಸ್ ವಿಶ್ವವಿದ್ಯಾಲಯ(74), ಮಂಗಳೂರು (60), ರೋಹ್ತಕ್ ಎಂಡಿಯು ವಿಶ್ವವಿದ್ಯಾಲಯ (29) ಹಾಗೂ ಮಹಿಳೆÀಯರ ವಿಭಾಗದಲ್ಲಿ ಚಂಡೀಗಢ ವಿಶ್ವವಿದ್ಯಾಲಯ (67), ಮದ್ರಾಸ್ ವಿಶ್ವವಿದ್ಯಾಲಯ (47) ಮತ್ತು ಮಂಗಳೂರು ವಿಶ್ವವಿದ್ಯಾಲಯ (38) ಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದವು. ಕ್ರೀಡಾಕೂಟದ ಅತ್ಯುತ್ತಮ ಅಥ್ಲೀಟ್ ಪ್ರಶಸ್ತಿಯನ್ನು ಮಹಿಳಾ ವಿಭಾಗದಲ್ಲಿ ಲವ್ಲೀ ಪ್ರೊಫೆಷನಲ್ ವಿಶ್ವವಿದ್ಯಾಲಯದ ಪೂಜಾ (ಹೈಜಂಪ್) ಹಾಗೂ ಪುರುಷರ ವಿಭಾಗದಲ್ಲಿ ಚೆನ್ನೆöÊ ಮದ್ರಾಸ್ ವಿಶ್ವವಿದ್ಯಾಲಯದ ಮೋಹನ್ ರಾಜ್ (ಟ್ರಿಪಲ್ ಜಂಪ್) ಮತ್ತು ಪಂಜಾಬ್ ಆರ್‌ಐಎಂಟಿ ವಿಶ್ವವಿದ್ಯಾಲಯದ ವಿಹ್ವೇಂದ್ರ ಸಿಂಗ್ (20 ಕಿ.ಮೀ. ನಡಿಗೆ) ಪಡೆದರು.

ಐದು ನೂತನ ಕೂಟ ದಾಖಲೆ :

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ನಡೆದ ಕ್ರೀಡಾಕೂಟದಲ್ಲಿ ಐದು ನೂತನ ಕೂಟ ದಾಖಲೆಗಳಾಗಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 25,000 ರೂಪಾಯಿ ನಗದು ಬಹುಮಾನ ನೀಡಲಾಯಿತು. 4*400 ಮೀಟರ್ಸ್ ಓಟದಲ್ಲಿ ಮಂಗಳೂರು ವಿಶ್ವವಿದ್ಯಾಲಯ ತಂಡ, 100 ಮೀ. ಓಟದಲ್ಲಿ ಸ್ಯಾಮ್ ವಸಂತ್ (ಕೊಯಂಮುತ್ತೂರು ಭಾರತೀಯರ್ ವಿ.ವಿ.), ಪೋಲ್‌ವಾಲ್ಟ್ನಲ್ಲಿ ಕುಲ್ದೀಪ್ ಯಾದವ್ (ಗ್ವಾಲಿಯರ್ ಐಟಿಎಂ ವಿ.ವಿ.), ಹೈಜಂಪ್‌ನಲ್ಲಿ ಪೂಜಾ (ಲವ್ಲೀ ಪ್ರೊಫೆಷನ್ ವಿ.ವಿ.) ಹಾಗೂ ಹ್ಯಾಮರ್ ಥ್ರೋ ತಾನ್ಯಾ ಚೌಧರಿ (ಚಂಡೀಗಢ ವಿ.ವಿ.) ದಾಖಲೆ ಬರೆದರು.

Category
ಕರಾವಳಿ ತರಂಗಿಣಿ