image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜ. 25ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

ಜ. 25ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ  ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ  ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಜ.25ರಂದು ಬೆಳಗ್ಗೆ 9ಕ್ಕೆ  ನಗರದ ಕದ್ರಿಯ ಕೆ.ಪಿ.ಟಿ.ಮೈದಾನದಲ್ಲಿ ನಡೆಯಲಿದೆ.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್. ಅಧ್ಯಕ್ಷತೆ ವಹಿಸಲಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತ  ಸುಧೀರ್ ಕುಮಾರ್ ರೆಡ್ಡಿ, ಕೆಪಿಟಿಯ ಪ್ರಾಂಶುಪಾಲ  ಹರೀಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ  ಅನ್ನು ಮಂಗಳೂರು ಉಪಸ್ಥಿತರಿರುವರು ಎಂದು ಜಿಲ್ಲಾ  ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್.ಕೆ .ಪೂಜಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ