image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು ನಗರದಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಾಣ : ದ.ಕ.ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ಮಾಹಿತಿ

ಮಂಗಳೂರು ನಗರದಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಾಣ : ದ.ಕ.ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ಮಾಹಿತಿ

ಮಂಗಳೂರು : ಮಂಗಳೂರು ನಗರದಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಿಸುವ ಅವಶ್ಯಕತೆ ಇದ್ದು ಈ ನಿಟ್ಟಿನಲ್ಲಿ ಸೂಕ್ತ ಜಾಗ ನಿಗದಿ ಪಡಿಸುವ ಪ್ರಯತ್ನ ನಡೆದಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ತಿಳಿಸಿದರು. ಬುಧವಾರ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಪತ್ರಕರ್ತರ ಜತೆ ಸಂವಾದ ನಡೆಸಿದ ಅವರು ಮಂಗಳೂರಿನಲ್ಲಿ ಆನೇಕ ಆಸ್ಪತ್ರೆಗಳು ಇರುವ ಕಾರಣದಿಂದಾಗಿ ಮೆಡಿಕಲ್ ತುರ್ತು ಆವಶ್ಯಕತೆಗಳಿಗೆ , ವಿಐಪಿಗಳಿಗೆ , ಹೆಲಿ ಟ್ಯೂರಿಸಂ ಹೆಲಿಪ್ಯಾಡ್ ಅಗತ್ಯವಾಗಿದೆ. ನಗರದಲ್ಲಿ ಪ್ರತ್ಯೇಕ ಹೆಲಿಪ್ಯಾಡ್ ಇಲ್ಲದ ಕಾರಣದಿಂದಾಗಿ ವಿಐಪಿಗಳು ಆಗಮಿಸುವಾಗ ಪ್ರತಿಬಾರಿಯೂ ಸಮಸ್ಯೆಯಾಗುತ್ತಿದೆ . ಈ ಕಾರಣದಿಂದಾಗಿ ಶಾಶ್ವತ ಹೆಲಿಪ್ಯಾಡ್ ನಿರ್ಮಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ಹೆಲಿ ಟೂರಿಸಂಗೂ ಶಾಶ್ವತ ಹೆಲಿಪ್ಯಾಡ್ ಹೆಚ್ಚು ಅನುಕೂಲವಾಗುತ್ತದೆ ಎಂದರು.

ರಾಷ್ಟ್ರೀಯ ಹೆದ್ದಾರಿಯ ನಂತೂರಿನಲ್ಲಿ ಫ್ಲೈ ಓವರ್ ನಿರ್ಮಾಣ ಸಂಬಂಧಿಸಿ ಸಮಗ್ರ ಯೋಜನಾ ವರದಿ( ಡಿಪಿಆರ) ತಯಾರಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಡಿಪಿಆರ್ ಫೆಬ್ರವರಿ ಅಂತ್ಯದೊಳೊಗೆ ಪೂರ್ಣಗೊಳ್ಳಲಿದೆ. ಬೈಕಂಪಾಡಿ-ಕೆಐಒಸಿಎಲ್ , ನಂತೂರು-ಕೆಪಿಟಿ ಎರಡೂ ಕಡೆ ಫ್ಲೈ ಓವರ್ ನಿರ್ಮಾಣವಾಗುವುದು ಖಚಿತ . ಕೆಪಿಟಿ ಬಳಿ ಪ್ರಸಾಪಿತ ಫೈ ಓವರ್ ರದ್ದಾಗಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ವಿವರ ನಿಡಿದರು. ಕನ್ನಡ ಕಡ್ಡಾಯ ಎಂದು ಹೇಳಿದರೆ ಇನ್ನೊಂದು ಭಾಷೆಯನ್ನು ಬಳಸಬಾರದು ಎಂದರ್ಥವಲ್ಲ. ಕನ್ನಡ ಭಾಷೆಯನ್ನು ಹೆಚ್ಚು ಬಳಸಲು ಪ್ರೇರೆಪಿಸುವುದು ನಮ್ಮ ಉದ್ದೇಶವಾಗಿದೆ.ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಸದಿದ್ದರೆ ವ್ಯಾಪಾರ ಪರವಾನಗಿ ರದ್ದು

ಮಾಡಲಾಗುವುದು ಎಂಬ ಆದೇಶ ನೀಡಿಲ್ಲ. ಆ ರೀತಿ ಆದೇಶ ಮಾಡಲು ಸಾಧ್ಯವಾಗುವುದಿಲ್ಲ. ನಾಮ ಫಲಕಗಳು ಕರ್ನಾಟಕದಲ್ಲಿ ಕನ್ನಡದಲ್ಲಿ ಇರಬೇಕು.ಕನ್ನಡದೊಂದಿಗೆ ಇತರ ಭಾಷೆಗಳನ್ನು ಬಳಸಬಾರದು ಎಂದೇನು ಇಲ್ಲ . ಯಾವುದೇ ಭಾಷೆಯಲ್ಲಿ ಬೋರ್ಡ್ ಇರಲಿ. ಆದರೆ ಕನ್ನಡದಲ್ಲಿ ಕೂಡಾ ಇರುವುದು ಕಡ್ಡಾಯ ಎಂದು ಅವರು ತಿಳಿಸಿದರು. ಪ್ರೆಸ್‌ಕ್ಲಬ್‌ಗೆ ಪ್ರಥಮ ಬಾರಿಗೆ ಆಗಮಿಸಿದ ಜಿಲ್ಲಾಧಿಕಾರಿ ಅವರನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಕ್ಲಬ್ ವತಿಯಿಂದ ಗೌರವಿಸಲಾಯಿತು. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್. ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ