image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಮಟ್ಟದ ವಿಶೇಷ ಮಕ್ಕಳ ಅಥ್ಲೆಟಿಕ್ ಸ್ಪರ್ಧೆಗೆ ಸೆಂಟ್ ಲಾರೆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಆಯ್ಕೆ

ರಾಷ್ಟ್ರೀಯ ಮಟ್ಟದ ವಿಶೇಷ ಮಕ್ಕಳ ಅಥ್ಲೆಟಿಕ್ ಸ್ಪರ್ಧೆಗೆ ಸೆಂಟ್ ಲಾರೆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಆಯ್ಕೆ

ಮಂಗಳೂರು: ಸೆಂಟ್ ಲಾರೆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಬೊಂದೇಲ್‌ನ ವಿದ್ಯಾರ್ಥಿ ಶ್ರೇಯಸ್ ಕುಮಾರ್ ಕೆ ರಾಜ್ಯ ಮಟ್ಟದ ವಿಶೇಷ ಮಕ್ಕಳ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಸಾಧನೆ ಮಾಡಿ ಶಾಲೆ ಹಾಗೂ ಕುಟುಂಬಕ್ಕೆ ಹೆಮ್ಮೆ ತಂದಿದ್ದಾನೆ. ಬೆಂಗಳೂರಿನ ರಾಮನಗರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಶ್ರೇಯಸ್ ಶಾಟ್‌ಪುಟ್ ಮತ್ತು ಜಾವೆಲಿನ್ ಎಸೆತ ಸ್ಪರ್ಧೆಗಳಲ್ಲಿ ಭಾಗವಹಿಸಿ, ಶಾಟ್‌ಪುಟ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ಶ್ರೇಯಸ್ ಅವರು ಶ್ರೀ ಪ್ರವೀಣ್ ಕುಮಾರ್ ಹಾಗೂ  ಶ್ರೀಮತಿ ಕವಿತಾ ಜೆಕೆ ಅವರ ಪುತ್ರ. 

ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಮತ್ತು ಹಿತೈಷಿಗಳು ಶ್ರೇಯಸ್ ಅವರ ಈ ಸಾಧನೆಗೆ ಅಭಿನಂದನೆ ಸಲ್ಲಿಸಿ, ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಹೆಚ್ಚಿನ ಯಶಸ್ಸು ಸಾಧಿಸಲಿ ಎಂದು ಹಾರೈಸಿದ್ದಾರೆ.

Category
ಕರಾವಳಿ ತರಂಗಿಣಿ